ಹುಬ್ಬಳ್ಳಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಹಿಟ್ಲರ್ಗೆ ಹೋಲಿಸಿ ಪೋಸ್ಟ್ ಮಾಡಿದ್ದ ಬಿಜೆಪಿ ಸಾಮಾಜಿಕ ಜಾಲತಾಣಗಳ ವಿಭಾಗದ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿ, ಅರವಿಂದನಗರದಲ್ಲಿ ಇರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಜುನ ಪಾಟೀಲ ನೇತೃತ್ವದಲ್ಲಿ ಕಾರ್ಯಕರ್ತರು ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿದರು. ಬಿಜೆಪಿ ನಾಯಕರ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದರು.

‘ಇಂದಿರಾ ಗಾಂಧಿ ಅವರನ್ನು ಹಿಟ್ಲರ್ಗೆ ಹೋಲಿಸಿದ್ದು ಸರಿಯಲ್ಲ. ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ಅನ್ನು ತೆಗೆದು ಹಾಕಬೇಕು’ ಎಂದು ಅರ್ಜುನ ಪಾಟೀಲ ಆಗ್ರಹಿಸಿದರು.

ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ ಸೇರಿದಂತೆ ಕಾರ್ಯಕರ್ತರು, ಮುಖಂಡರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.