ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ | ಕಾಂಗ್ರೆಸ್‌ನಿಂದ ವಿಜಯ ಸಂಕಲ್ಪ ಶಿಬಿರ

Last Updated 25 ಜನವರಿ 2023, 5:24 IST
ಅಕ್ಷರ ಗಾತ್ರ

ಧಾರವಾಡ: ‘ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಸಂಘಟನೆಗೆ ಶ್ರಮಿಸಬೇಕು. ಬೂತ್ ಮಟ್ಟದಿಂದ ವ್ಯವಸ್ಥಿತವಾಗಿ ಕೆಲಸ ಮಾಡಿ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಬೇಕು’ ಎಂದು ಕಾಂಗ್ರೆಸ್ ಪಕ್ಷದ ಬೆಳಗಾವಿ ವಿಭಾಗದ ಉಸ್ತುವಾರಿ ಪಿ. ವಿಷ್ಣುನಾಥ ಹೇಳಿದರು.

ನಗರದ ರಾಜ್ಯ ನೌಕರರ ಸಂಘದ ಸಭಾಭವನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಧಾರವಾಡ- 71 ವಿಧಾನ ಸಭಾ ಕ್ಷೇತ್ರದ ಬೂತ್ ಜಯಬೇರಿ ಅಭಿಯಾನದ ಅಂಗವಾಗಿ ಬ್ಲಾಕ್ ಮಟ್ಟದ ಬೂತ್ ನಾಯಕರುಗಳ ವಿಜಯ ಸಂಕಲ್ಪ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

‘ಸಮೀಕ್ಷೆ ಪ್ರಕಾರ ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಉತ್ತಮ ವಾತಾವರಣ ಇದೆ. ಹೀಗಾಗಿ ಈ ಅವಕಾಶ ಬಳಸಿಕೊಂಡು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು. ಬೂತ್ ಮಟ್ಟದಲ್ಲಿ ಕಾರ್ಯಕರ್ತರು, ಮುಖಂಡರು ಸಾರ್ವಜನಿಕರಿಗೆ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕು. ಶೇ. 40 ಕಮಿಷನ್, ರಸ್ತೆಗಳ ದುಸ್ಥಿತಿ, ವಿವಿಧ ನೇಮಕಾತಿ ಹಗರಣ, ಪೆಟ್ರೋಲ್–ಡಿಸೇಲ್ ಬೆಲೆ ಹೆಚ್ಚಳ, ಗ್ಯಾಸ್ ಸಿಲಿಂಡರ್ ದರ ಏರಿಕೆ ಹೀಗೆ ಎಲ್ಲದರ ಕುರಿತು ಜನರಿಗೆ ತಿಳಿವಳಿಕೆ ನೀಡಿ, ಜಾಗೃತಿ ಮೂಡಿಸುವ ಕೆಲಸ ಮಾಡಬೇಕು’ ಎಂದರು.

‘ನಾಯಕರು ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪ್ರತಿ ಬೂತ್‌ನಿಂದಲೂ ಮತಗಳಿಕೆ ಪ್ರಮಾಣ ಹೆಚ್ಚಾಗುವಂತೆ ನೋಡಿಕೊಳ್ಳಬೇಕು. ಅದಕ್ಕೆ ಸ್ಥಳೀಯ ನಾಯಕರ ಸಹಕಾರದೊಂದಿಗೆ ಬೂತ್ ಕಾರ್ಯಕರ್ತರು ಶ್ರಮಿಸಬೇಕು’ ಎಂದರು.

ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ ಮಾತನಾಡಿ, ‘ಧಾರವಾಡ ಗ್ರಾಮೀಣ ಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿನ ಎಲ್ಲ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಪ್ರಭಾವ ಹೆಚ್ಚಿದೆ. ಪ್ರಸ್ತುತ ಬಿಜೆಪಿ ಸರ್ಕಾರದ ಆಡಳಿತಕ್ಕೆ ಜನರು ಬೇಸತ್ತಿದ್ದಾರೆ. ಹೀಗಾಗಿ ಹೆಚ್ಚಿನ ಜನರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಬೂತ್ ಮಟ್ಟದಿಂದಲೂ ವ್ಯವಸ್ಥಿತವಾಗಿ ಪಕ್ಷ ಸಂಘಟನೆ ಮಾಡುವ ಮೂಲಕ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು’ ಎಂದು ಮನವಿ ಮಾಡಿದರು.

ಕಾಂಗ್ರೆಸ್ ಯುವ ಮುಖಂಡ ಮೋಹನ ಅವರು, ಬೂತ್ ನಾಯಕರುಗಳಿಗೆ ಪಕ್ಷದ ಸಂಘಟನೆ ಕುರಿತು ಪಿಪಿಟಿ ಮೂಲಕ ವಿವರಿಸಿದರು.

ಕೆಪಿಸಿಸಿ ಉಪಾಧ್ಯಕ್ಷ ಪಿ.ವಿ. ಮೋಹನ್, ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ, ಪಿ.ಎಚ್. ನೀರಲಕೇರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ ಶಿವಳ್ಳಿ, ಗೌರಮ್ಮ ನಾಡಗೌಡರ, ರೇಣುಕಾ ಕಳ್ಳಿಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT