ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ ಜಿಲ್ಲೆಗೆ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್ ಪ್ರಮಾಣಪತ್ರ

ಸಂವಿಧಾನ ಜಾಗೃತಿ ಜಾಥಾದಲ್ಲಿ ಅತಿ ಹೆಚ್ಚು ಜನರು ಪಾಲ್ಗೊಂಡ ದಾಖಲೆ
Published 24 ಫೆಬ್ರುವರಿ 2024, 14:13 IST
Last Updated 24 ಫೆಬ್ರುವರಿ 2024, 14:13 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಸಂವಿಧಾನ ಜಾಗೃತಿ ಜಾಥಾ ಅಭಿಯಾನದ ಪ್ರಯುಕ್ತ ಧಾರವಾಡ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ‘ಪಾರಂಪರಿಕ ನಡಿಗೆ’ ಹಾಗೂ ‘ಪಂಜಿನ ಮೆರವಣಿಗೆ‘ ಕಾರ್ಯಕ್ರಮ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ (ಐಬಿಆರ್‌)ಗೆ ಸೇರ್ಪಡೆಯಾಗಿದೆ.

ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಆವರಣದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಐಬಿಆರ್‌ ನಿರ್ಣಾಯಕ ನರವಿಜಯ ಯಾದವ್‌ ಅವರು ಜಿಲ್ಲಾಧಿಕಾರಿ ದಿವ್ಯಾಪ್ರಭು ಮತ್ತು ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರಿಗೆ ಪ್ರಮಾಣಪತ್ರ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌, ಶಾಸಕ ಪ್ರಸಾದ ಅಬ್ಬಯ್ಯ ಉಪಸ್ಥಿತರಿದ್ದರು.

ದಿವ್ಯಾ ಪ್ರಭು ಮಾತನಾಡಿ, ‘ಫೆಬ್ರುವರಿ 17ರಂದು ಧಾರವಾಡದಲ್ಲಿ ಹಮ್ಮಿಕೊಂಡಿದ್ದ ಪಾರಂಪರಿಕ ನಡಿಗೆಯಲ್ಲಿ 25 ಸಾವಿರಕ್ಕೂ ಹೆಚ್ಚು ಮಂದಿ, ಫೆಬ್ರುವರಿ 19ರಂದು ಹುಬ್ಬಳ್ಳಿಯಲ್ಲಿ ನಡೆದ ಪಂಜಿನ ಮೆರವಣಿಗೆಯಲ್ಲಿ 15 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು‘ ಎಂದು ತಿಳಿಸಿದರು.

ಸಂವಿಧಾನ ಕುರಿತು ಅರಿವು ಮೂಡಿಸಲು ರಾಜ್ಯ ಸರ್ಕಾರ ಜನವರಿ 26ರಿಂದ ಪ್ರತಿ ಜಿಲ್ಲೆಯಲ್ಲಿ ಜಾಗೃತಿ ಜಾಥಾ ಆಯೋಜಿಸಲು ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT