ಧಾರವಾಡ: ಕೃಷಿ ವಿಶ್ವವಿದ್ಯಾಲಯದ ಹೊಲದಲ್ಲಿ ಅಪರಿಚಿತರು ಅಯ್ಯಪ್ಪಸ್ವಾಮಿ ಮೂರ್ತಿ ತಂದಿಟ್ಟ ಸ್ಥಳದಲ್ಲಿ ಶುಕ್ರವಾರ ತಡರಾತ್ರಿ ಶೆಡ್ ನಿರ್ಮಿಸಲಾಗಿದೆ. ಮೂರ್ತಿ ಇರುವ ಕಟ್ಟೆಯ ನಾಲ್ಕು ಕಡೆ ಸಿಮೆಂಟ್ ಕಂಬ ನಿಲ್ಲಿಸಿ ಚಾವಣಿಗೆ ಶೀಟ್ ಅಳವಡಿಸಲಾಗಿದೆ. ತಳಿರು ತೋರಣ ಕಟ್ಟಲಾಗಿದೆ.

ಮಾಲಾಧಾರಿಗಳು ಅಯ್ಯಪ್ಪ ಸ್ವಾಮಿ ಮೂರ್ತಿಗೆ ಶನಿವಾರ ಪೂಜೆ ನೆರವೇರಿಸಿದರು. ಭಕ್ತರಿಗೆ ಪ್ರಸಾದ ವಿತರಿಸಿದರು. ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್, ಗಂಗಾಧರ ಕುಲಕರ್ಣಿ ಇತರರು ಪಾಲ್ಗೊಂಡಿದ್ದರು. ‘ಮೂರ್ತಿಯನ್ನು ತೆರವುಗೊಳಿಸಿದರೆ, ಪ್ರತಿಭಟನೆ ನಡೆಸಲಾಗುವುದು’ ಎಂದು ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದರು.

‘ಅಯ್ಯಪ್ಪ ಸ್ವಾಮಿ ಮೂರ್ತಿ ಇಟ್ಟಿರುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗೆ ದೂರು ನೀಡಿದ್ದೇನೆ. ಜಿಲ್ಲಾಡಳಿತ ಮತ್ತು ಪೊಲೀಸರೊಂದಿಗೆ ಚರ್ಚಿಸಿ ಕ್ರಮ ವಹಿಸುವೆ’ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್.ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.

‘ವಿಶ್ವವಿದ್ಯಾಲಯದ ಜಾಗದಲ್ಲಿ ಮೂರ್ತಿ ಇಟ್ಟಿದ್ದಾರೆ. ವಿಶ್ವವಿದ್ಯಾಲಯದವರು ಕ್ರಮ ವಹಿಸಬೇಕು. ಜಿಲ್ಲಾಡಳಿತದ ಸಹಕಾರ ಕೋರಿದರೆ ನೀಡಲಾಗುವುದು’ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.