ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ: ಪಿಎಫ್ ಇಲಾಖೆಗೆ ₹5ಲಕ್ಷ ಪರಿಹಾರ ನೀಡಲು ಆದೇಶ

Published 27 ಮೇ 2023, 7:40 IST
Last Updated 27 ಮೇ 2023, 7:40 IST
ಅಕ್ಷರ ಗಾತ್ರ

ಧಾರವಾಡ: ಪಿಂಚಣಿ ನಿಗದಿಪಡಿಸುವಾಗ ತಪ್ಪಾಗಿ ಲೆಕ್ಕ ಹಾಕಿ ಸೇವಾ ನ್ಯೂನತೆ ಎಸಗಿದ ಆರೋಪದಡಿ ಭವಿಷ್ಯ ನಿಧಿ ಇಲಾಖೆಗೆ ಪರಿಹಾರ ಹಾಗೂ ಬಡ್ಡಿ ಸಹಿತ ಹಣ ಮರಳಿಸುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಸೂಚಿಸಿದೆ.

ಈ ಕುರಿತು ಎಂಟು ಜನ ನಿವೃತ್ತ ಪಿಂಚಣಿದಾರರು ಆಯೋಗಕ್ಕೆ ದೂರು ಸಲ್ಲಿಸಿದ್ದರು. ಇದರ ವಿಚಾರಣೆಯನ್ನು ಆಯೋಗದ ಅಧ್ಯಕ್ಷ ಈಶಪ್ಪ ಕೆ. ಭೂತೆ ಹಾಗೂ ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಹಾಗೂ ಪಿ.ಸಿ.ಹಿರೇಮಠ ನಡೆಸಿದರು.

‘ಭವಿಷ್ಯ ನಿಧಿ ಇಲಾಖೆಯಿಂದ ಪ್ರತಿ ತಿಂಗಳು ನಡೆಯುವ ಪಿಂಚಣಿ ಲೋಕ್‌ ಅದಾಲತ್‌ನಲ್ಲಿ ದೂರುದಾರರು ಭಾಗವಹಿಸಿ ಪರಿಹಾರ ಕಂಡುಕೊಳ್ಳದೇ ಅನಗತ್ಯವಾಗಿ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದು ತಪ್ಪು. ಹೀಗಾಗಿ ದೂರನ್ನು ವಜಾಗೊಳಿಸಬೇಕು’ ಎಂದು ಭವಿಷ್ಯ ನಿಧಿ ಇಲಾಖೆಯ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು.

ಆದರೆ, ಪಿಂಚಣಿ ನಿಗದಿಪಡಿಸುವಾಗ ಇಲಾಖೆ ಸರಿಯಾಗಿ ಲೆಕ್ಕ ಹಾಕದೇ ತಪ್ಪೆಸಗಿರುವುದು ಮೇಲ್ನೋಟಕ್ಕೆ ಕಂಡುಬರುವುದರಿಂದ ಅವರು ಸೇವಾ ನ್ಯೂನತೆ ಎಸಗಿದ್ದಾರೆ ಎಂದು ಆಯೋಗ ಅಭಿಪ್ರಾಯಪಟ್ಟಿತು. ಜತೆಗೆ ಭವಿಷ್ಯ ನಿಧಿ ಇಲಾಖೆಯ ವಾದವನ್ನು ತಳ್ಳಿಹಾಕಿತು.

ದೂರುದಾರರಿಗೆ ಅವರ ಪಿಂಚಣಿ ನಿಗದಿಪಡಿಸಿದ ದಿನಾಂಕದಿಂದ ಆಯೋಗ ಆದೇಶ ಹೊರಡಿಸಿದ ದಿನಾಂಕದವರೆಗೆ 8 ಜನ ದೂರುದಾರರಿಗೆ ಒಟ್ಟು ₹5.63 ಲಕ್ಷ ಬಾಕಿ ಹಣ ಮತ್ತು ಅದರ ಮೇಲೆ ಶೇ 10ರಂತೆ ಬಡ್ಡಿ ಲೆಕ್ಕ ಹಾಕಿ ನೀಡುವಂತೆ ಆಯೋಗ ಆದೇಶಿಸಿದೆ. ಜತೆಗೆ ಪ್ರತಿಯೊಬ್ಬ ದೂರುದಾರರಿಗೆ ಆಗಿರುವ ಮಾನಸಿಕ ತೊಂದರೆಗೆ ತಲಾ ₹20 ಸಾವಿರ ಪರಿಹಾರ ಹಾಗೂ ₹10ಸಾವಿರ ಪ್ರಕರಣದ ವೆಚ್ಚವನ್ನು ನೀಡಬೇಕು ಎಂದು ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT