ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲುಷಿತ ನೀರು ಸರಬರಾಜು

ನವಲಗುಂದ ಪುರಸಭೆ ವಿರುದ್ಧ ನಾಗರಿಕರ ಆಕ್ರೋಶ
Last Updated 17 ನವೆಂಬರ್ 2022, 4:29 IST
ಅಕ್ಷರ ಗಾತ್ರ

ನವಲಗುಂದ: ಪುರಸಭೆ ಪೂರೈಕೆ ಮಾಡುತ್ತಿರುವ ನೀರು ಕುಲುಷಿತವಾಗಿದ್ದು, ನಾಗರಿಕರು ಪುರಸಭೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಟ್ಟಣದಲ್ಲಿ ಐದು ದಿನಕ್ಕೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ನೀರಿನಲ್ಲಿ ಕೊಳಚೆ ನೀರು ಮಿಶ್ರಣವಾಗುತ್ತಿದ್ದು, ಕುಡಿಯಲು ಯೋಗ್ಯವಾಗಿಲ್ಲ. 7ನೇ ವಾರ್ಡ್‌ನಲ್ಲಿ ಕಳೆದ ಹಲವು ತಿಂಗಳುಗಳಿಂದ ಈ ಸಮಸ್ಯೆ ಇದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಹಲವು ಬಾರಿ ಮನವಿ ಮಾಡಿದರೂ ಪುರಸಭೆ ಯಾವುದೇ ಕ್ರಮ ಕೈಗೊಂಡಿಲ್ಲ. ಕಲುಷಿತ ನೀರು ಕುಡಿದು ಹಲವರು ಅನಾರೋಗ್ಯಕ್ಕೀಡಾಗಿದ್ದಾರೆ ಎಂದು ಜನರು ದೂರುತ್ತಾರೆ.

ಕುಡಿಯುವ ನೀರಿನ ಪೂರೈಕೆಗಾಗಿಯೇ ಲಕ್ಷಾಂತರ ರೂಪಾಯಿ ಅನುದಾನ ಮೀಸಲಿದ್ದರೂ ಸಮಸ್ಯೆ ಮಾತ್ರ ತಪ್ಪಿಲ್ಲ. ವಾರಕ್ಕೊಮ್ಮೆ ಪೂರೈಕೆ ಮಾಡುವ ನೀರು ಸಹ ಕಲುಷಿತವಾದರೆ ಏನು ಮಾಡುವುದು. ನೀಲಮ್ಮನ ಜಲಾಶಯದ ಹೂಳೆತ್ತಿದರೂ ಯಾವುದೇ ಪ್ರಯೋಜನಾ ಆಗಿಲ್ಲ ಎನ್ನುತ್ತಾರೆ ಸ್ಥಳೀಯರು.

ಸುಮಾರು ಎರಡು ತಿಂಗಳಿಂದ ಕುಡಿಯುವ ನಳದ ನೀರಿನಲ್ಲಿ ಚರಂಡಿ ಮಿಶ್ರಣವಾಗುತ್ತಿದೆ. ಪುರಸಭೆ ಅಧಿಕಾರಿಗಳು ಮಾತ್ರ ಈ ಬಗ್ಗೆ ಗಮನ ಹರಿಸಿಲ್ಲ. ಇದರಿಂದಾಗಿ ತೀವ್ರ ತೊಂದರೆ ಅನುಭವಿಸುವಂತಾಗಿದೆ ಎನ್ನುತ್ತಾರೆ ವಾರ್ಡ್‌ ನಿವಾಸಿ ಜೈನುದ್ದೀನ ದಾ. ಕಾಸ್ತರ.

ಕುಡಿಯುವ ನೀರಿನಲ್ಲಿ ಕುಲುಷಿತ ನೀರು ಮಿಶ್ರಣ ಹೇಗೆ ಆಗುತ್ತಿದೆ ಎಂಬುದನ್ನು ಪರಿಶೀಲಿಸಿ ಐದು ದಿನಗಳಲ್ಲಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎನ್ನುತ್ತಾರೆಪುರಸಭೆ 7ನೇ ವಾರ್ಡ್ ಸದಸ್ಯ ಹನುಮಂತ ತಳವಾರ.

ಕಲುಷಿತ ನೀರು ಪೂರೈಕೆ ವಿಷಯ ಗಮನಕ್ಕೆ ಬಂದಿದ್ದು, ಹೊಸ ಪೈಪ್‌ಗಳ ಜೋಡಣೆ ಮಾಡಿ ಸಮಸ್ಯೆ ಬಗೆಹರಿಸಲಾಗುವುದು
ವೀರೇಶ ಹಸಬಿ, ಪುರಸಭೆ ಮುಖ್ಯಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT