ನ್ಯಾಯಾಂಗ ನಿಂದನೆ ತೀರ್ಪು ಮರುಪರಿಶೀಲಿಸಲಿ: ಎಸ್.ಆರ್. ಹಿರೇಮಠ
ಹುಬ್ಬಳ್ಳಿ: ಹಿರಿಯ ವಕೀಲ ಹಾಗೂ ಹೋರಾಟಗಾರ ಪ್ರಶಾಂತ್ ಭೂಷಣ್ ಅವರ ವಿರುದ್ಧ ನೀಡಿರುವ ನ್ಯಾಯಾಂಗ ನಿಂದನೆ ಪ್ರಕರಣದ ತೀರ್ಪನ್ನು ನ್ಯಾಯಾಲಯ ಮರು ಪರಿಶೀಲಿಸಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮೆರಿಕ, ಕೆನಡಾ ದೇಶದಲ್ಲಿ ಭೂಷಣ್ ಅವರನ್ನು ಬೆಂಬಲಿಸಿ ಅ.22 ರಂದು ಉಪವಾಸ ಸತ್ಯಾಗ್ರಹ ಮಾಡಲಾಗುತ್ತಿದೆ ಎಂದರು.
ಧಾರವಾಡ ಹಾಗೂ ಹಾವೇರಿಯಲ್ಲಿಯೂ ಹೋರಾಟ ನಡೆಯಲಿದೆ. ಸಂವಿಧಾನ ಉಳಿಯಬೇಕಾದರೆ ನ್ಯಾಯಾಂಗದ ಕರ್ತವ್ಯ ಬಹುಮುಖ್ಯವಾಗಿದೆ. ಪ್ರಜಾಪ್ರಭುತ್ವದ 3ನೇ ಆಧಾರ ಸ್ಥಂಭವಾದ ನ್ಯಾಯಾಂಗ ಹಾಗೂ ಸತ್ಯದ ಪರಿಕಲ್ಪನೆಯನ್ನು ಎತ್ತಿ ಹಿಡಿಯಲು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಸಾರ್ವಜನಿಕ ಸೇವಕ ಎಂದು ಹೇಳಿಕೊಳ್ಳುತ್ತಾರೆ. ಸಂಘ–ಪರಿವಾರದವರು ದೇಶದ ಪ್ರಜಾಪ್ರಭುತ್ವ, ಸಂವಿಧಾನಕ್ಕೆ ಕೊಡಲಿ ಪೆಟ್ಟು ನೀಡುತ್ತಿದ್ದಾರೆ. ಮೋದಿ ಈ ಬಗ್ಗೆ ಮೌನವಾಗಿದ್ದಾರೆ ಎಂದು ಟೀಕಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.