‘ನದಿನೀರು ಹಂಚಿಕೆ ಪರಿಹಾರ ಬೇಕಿದೆ’
‘ರಾಜ್ಯ–ರಾಜ್ಯಗಳ ನಡುವಿನ ನದಿ ನೀರು ಹಂಚಿಕೆ ವಿಷಯದಲ್ಲಿ ಕಾನೂನು ತೊಡಕುಗಳು ಸಮಸ್ಯೆಯನ್ನು ತಂದೊಡ್ಡುತ್ತಿದ್ದು ಸೂಕ್ತ ರೀತಿಯಲ್ಲಿ ಪರಿಹಾರ ಕಂಡುಕೊಳ್ಳಲು ಸರ್ಕಾರ ಹಾಗೂ ಜನಪ್ರತಿನಿಧಿಗಳು ಮುಂದಾಗಬೇಕು’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು. ‘ಆಲಮಟ್ಟಿ ಅಣೆಕಟ್ಟೆ ಎತ್ತರ ಹೆಚ್ಚಿಸುವ ಕರ್ನಾಟಕದ ನಿರ್ಧಾರಕ್ಕೆ ಮಹಾರಾಷ್ಟ್ರ ಆಕ್ಷೇಪಿಸುತ್ತಿದೆ. ಕೊಲ್ಲಾಪುರ ಸಾಂಗ್ಲಿ ಭಾಗದಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿದೆ ಎನ್ನುವುದು ಅದರ ವಾದ. ಕೃಷ್ಣಾ ನ್ಯಾಯಮಂಡಳಿ ಆದೇಶದ ಪ್ರಕಾರ ಎತ್ತರ ಹೆಚ್ಚಿಸುವುದು ರಾಜ್ಯದ ಹಕ್ಕು. ಇಂತಹ ಕಲಹಗಳಿಂದ ನದಿ ನೀರು ಸರಿಯಾಗಿ ಹಂಚಿಕೆ ಆಗುತ್ತಿಲ್ಲ. ಕೋರ್ಟ್‌ನಲ್ಲಿ ವಾದ ಸರಿಯಾಗಿ ಮಂಡಿಸಬೇಕಿದೆ’ ಎಂದರು.