ಸೋಮವಾರ, ಆಗಸ್ಟ್ 2, 2021
27 °C

ಹುಬ್ಬಳ್ಳಿ: ಅನಿಲ ಸೋರಿಕೆ, ತಪ್ಪಿದ ಭಾರಿ ಅನಾಹುತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಹುಬ್ಬಳ್ಳಿ: ನವನಗರದ ಕರ್ನಾಟಕ ವೃತ್ತದಲ್ಲಿ ಮನೆ ಮನೆಗೆ ಅಡುಗೆ ಅನಿಲ ಪೂರೈಸುವ ಮಾರ್ಗದಲ್ಲಿ ಅನಿಲ ಸೋರಿಕೆಯಾಗಿ ಕೆಲಕಾಲ ಭೀತಿಯ ವಾತಾವರಣ ನಿರ್ಮಾಣವಾಯಿತು.

ಸ್ಥಳೀಯರು ತಕ್ಷಣ ಸಮೀಪದ ಅನಿಲ ಪೂರೈಕೆಯನ್ನು ಸ್ಥಗಿತಗೊಳಿಸಿ, ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು.

ಸ್ಥಳಕ್ಕೆ ಬಂದ ಸಿಬ್ಬಂದಿ ಅನಿಲ ಹರಡದಂತೆ, ಫೋಮ್ ಸಿಂಪಡಿಸಿದ್ದರಿಂದ ಭಾರಿ ಅನಾಹುತ ತಪ್ಪಿತು. ಘಟನೆಯಿಂದ ರೊಚ್ಚಿಗೆದ್ದ ಸ್ಥಳೀಯರು ಅನಿಲ ಪೂರೈಸುವ ಅದಾನಿ ಗ್ಯಾಸ ಪೈಪ್ ಲೈನ್ ಪ್ರೈವೇಟ್ ಲಿಮಿಟೆಡ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು