ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌-19 ಹಿನ್ನೆಲೆ | ಧಾರವಾಡ ಜಿಲ್ಲೆಯಲ್ಲಿ ಲಾಕ್‌ಡೌನ್‌ಗೆ ಅಂತಿಮ ಸಿದ್ಧತೆ

Last Updated 15 ಜುಲೈ 2020, 4:31 IST
ಅಕ್ಷರ ಗಾತ್ರ

ಧಾರವಾಡ: ಕೋವಿಡ್-19 ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಬುಧವಾರ ಬೆಳಿಗ್ಗೆ 10ರಿಂದ ಲಾಕ್‌ಡೌನ್‌ ಜಾರಿಗೆ ಬರಲಿದ್ದು, ಅದಕ್ಕಾಗಿ ಅಧಿಕಾರಿಗಳು ಅಂತಿಮ ಸಿದ್ಧತೆ ನಡೆಸಿದರು.

ಜಿಲ್ಲೆಯನ್ನು ಪ್ರವೇಶಿಸುವ 16 ಮಾರ್ಗಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ.

ಕಾರವಾರ ರಸ್ತೆ, ಗೋವಾ ರಸ್ತೆ, ಬೆಳಗಾವಿ ರಸ್ತೆ, ಗದಗ ರಸ್ತೆ ಸೇರಿದಂತೆ 16 ರಸ್ತೆಗಳಲ್ಲಿ ಜಿಲ್ಲಾ ಪೊಲೀಸರು ಚೆಕ್ ಪೋಸ್ಟ್, ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ.

ಸೇವಾಸಿಂಧು ಮೂಲಕ ಅನುಮತಿ ಪಡೆಯದಿದ್ದರೆ ಜಿಲ್ಲೆ ಪ್ರವೇಶ ಹಾಗೂ ನಿರ್ಗಮನ ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿ ಮಂಗಳವಾರ ಆದೇಶ ಹೊರಡಿಸಿದ್ದರು.

ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನ 100 ಕೊರೊನ ಸೋಂಕಿನ ಹೊಸ ಪ್ರಕರಣ ದಾಖಲಾಗಿದ್ದು ಒಟ್ಟು 1259ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ39 ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT