ಶನಿವಾರ, ಸೆಪ್ಟೆಂಬರ್ 18, 2021
26 °C

ಹುಬ್ಬಳ್ಳಿ: ಕಿಮ್ಸ್‌ ಆಸ್ಪತ್ರೆಯಿಂದ ಕೊರೊನಾ ಸೋಂಕಿತ ಪರಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಕೋವಿಡ್‌ –19 ಇರುವುದು ದೃಢಪಟ್ಟಿದ್ದ ಕಳ್ಳತನ ಆರೋಪಿ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಿಂದ ಶುಕ್ರವಾರ ಬೆಳಗಿನ ಜಾವ ಪರಾರಿಯಾಗಿದ್ದಾನೆ.

ಬೆಳಿಗ್ಗೆ 5.30ರ ಸುಮಾರಿಗೆ ಕೋವಿಡ್‌ ಚಿಕಿತ್ಸಾ ವಾರ್ಡ್‌ನಿಂದ ಹೊರಗಡೆ ಹೋಗುತ್ತಿರುವ ದೃಶ್ಯ ಸಿಸಿಟಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಬ್ಬರು ಪೊಲೀಸರು ಕಾವಲಿದ್ದರೂ, ಅವರ ಕಣ್ತಪ್ಪಿಸಿ ಪರಾರಿಯಾಗಿದ್ದಾನೆ.

ಹಾರ್ಡ್‌ವೇರ್ ಅಂಗಡಿ ಕಳ್ಳತನ ಆರೋಪದ ಮೇಲೆ ಉಪನಗರ ಠಾಣೆಯ ಪೊಲೀಸರು ಆತನನ್ನು ಬಂಧಿಸಿದ್ದರು. ಆರೋಗ್ಯ ತಪಾಸಣೆಗೆ ಒಳಪಡಿಸಿದಾಗ ಕೋವಿಡ್‌–19 ಇರುವುದು ದೃಢಪಟ್ಟಿತ್ತು. ಚಿಕಿತ್ಸೆಗಾಗಿ ಕೋವಿಡ್‌ ಆಸ್ಪತ್ರೆ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಆರೋಪಿ ಸಂಪರ್ಕಕ್ಕೆ ಬಂದಿದ್ದ ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬರಿಗೂ ಕೋವಿಡ್‌–19 ಇರುವುದು ದೃಢಪಟ್ಟಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು