ಧಾರವಾಡ: ಕೋವಿಡ್–19 ಸೋಂಕಿನಿಂದ ಮತ್ತಿಬ್ಬರು ಗುಣಮುಖರಾಗಿದ್ದು, ಭಾನುವಾರ ರಾತ್ರಿ ಇವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಹುಬ್ಬಳ್ಳಿಯ ಮುಲ್ಲಾ ಓಣಿಯ 5 ವರ್ಷದ ಬಾಲಕ (ಪಿ–233) ಹಾಗೂ ಬಾಲಕನ ತಂದೆ 37 ವರ್ಷದ ವ್ಯಕ್ತಿ (ಪಿ236) ಇವರು ಸೋಂಕು ಮುಕ್ತರಾಗಿದ್ದಾರೆ.

24 ಗಂಟೆಗಳ ಅಂತರದಲ್ಲಿ ಎರಡು ಬಾರಿ ಇವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಇಲ್ಲದಿರುವುದನ್ನು ಪ್ರಯೋಗಾಲಯದ ತಜ್ಞರು ಖಚಿತಪಡಿಸಿದ್ದಾರೆ. ಕ್ಷ–ಕಿರಣ ಪರೀಕ್ಷೆಯಲ್ಲಿ ಶ್ವಾಸಕೋಶದಲ್ಲೂ ತೊಂದರೆ ಇಲ್ಲ ಎಂಬುದನ್ನು ವೈದ್ಯರು ದೃಢಪಡಿಸಿದ್ದಾರೆ. ಹೀಗಾಗಿ ಇವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೂ 6 ಜನ ಕೋವಿಡ್ನಿಂದ ಗುಣಮುಖರಾಗಿದ್ದಾರೆ. ಸದ್ಯ 4 ಜನ ಹಾಗೂ ಬಾಗಲಕೋಟೆ ಜಿಲ್ಲೆಯ ಬದಾಮಿಯ ಒಬ್ಬರು ಕಿಮ್ಸ್ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಚೋಳನ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.