ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ: ಆ್ಯಂಟಿಜೆನ್ ಪರೀಕ್ಷೆ ಆರಂಭ

Last Updated 30 ಜುಲೈ 2020, 14:56 IST
ಅಕ್ಷರ ಗಾತ್ರ

ಧಾರವಾಡ: ಇಲ್ಲಿನ ಮಾರುಕಟ್ಟೆ ಪ್ರದೇಶದಲ್ಲಿ ತ್ವರಿತ ಆ್ಯಂಟಿಜೆನ್ ಪರೀಕ್ಷೆ ಗುರುವಾರದಿಂದ ಆರಂಭವಾಗಿದ್ದು, ಮೊದಲ ದಿನ 19 ಜನರಲ್ಲಿ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಮಾರುಕಟ್ಟೆ ಪ್ರದೇಶದ 6 ಅಂಗಡಿಗಳನ್ನು ಸೀಲ್‌ಡೌನ್ ಮಾಡಲಾಗಿದೆ.

ಅವಳಿ ನಗರದ ಪ್ರಮುಖ ಮಾರುಕಟ್ಟೆ ಪ್ರದೇಶಗಳಲ್ಲಿ ಆರಂಭಿಸಿರುವ ತ್ವರಿತ ಆ್ಯಂಟಿಜೆನ್ ಕೊರೊನಾ ಪರೀಕ್ಷೆಗಾಗಿ 12 ವಿಶೇಷ ತಂಡಗಳನ್ನು ಜಿಲ್ಲಾಧಿಕಾರಿ ರಚಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೂ ನೇಮಿಸಲಾಗಿದೆ.

ಅದರಂತೆಯೇ ಇಲ್ಲಿನ ಸುಭಾಸರಸ್ತೆಯಲ್ಲಿ ಪರೀಕ್ಷಾ ವಾಹನದೊಂದಿಗೆ ಬಂದ ಆರೋಗ್ಯ ಇಲಾಖೆ ಸಿಬ್ಬಂದಿ, ಮಾರುಕಟ್ಟೆಯಲ್ಲಿನ ಕೆಲ ಅಂಗಡಿಗಳಲ್ಲಿರುವವರು ಹಾಗೂ ಮಾರುಕಟ್ಟೆಗೆ ಬಂದವರ ಪರೀಕ್ಷೆ ನಡೆಸಿತು. ಇದರಲ್ಲಿ ಕೆಲವರಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿತ ವ್ಯಕ್ತಿ ಇರುವ ಅಂಗಡಿಗಳನ್ನು ತಹಶೀಲ್ದಾರ್ ನೇತೃತ್ವದಲ್ಲಿ ಏಳು ದಿನಗಳ ಕಾಲ ಸೀಲ್‌ಡೌನ್ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT