ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತಕ್ಕೆ ಬರುವ ತಂಡಗಳು ಅಫ್ಗಾನ್‌ ವಿರುದ್ಧ ಪಂದ್ಯ ಆಡಬೇಕು: ಅಮಿತಾಭ್‌

Last Updated 31 ಮೇ 2018, 19:30 IST
ಅಕ್ಷರ ಗಾತ್ರ

ಕಾಬುಲ್‌: ‘ಇನ್ನು ಮುಂದೆ ಕ್ರಿಕೆಟ್‌ ಸರಣಿ ಆಡಲು ಭಾರತಕ್ಕೆ ಬರುವ ಎಲ್ಲಾ ತಂಡಗಳು ಅಫ್ಗಾನಿಸ್ತಾನದ ವಿರುದ್ಧ ಒಂದು ಅಭ್ಯಾಸ ಪಂದ್ಯ ಆಡುವ ವ್ಯವಸ್ಥೆ ಮಾಡುತ್ತೇವೆ’ ಎಂದು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕಾರ್ಯದರ್ಶಿ ಅಮಿತಾಭ್‌ ಚೌಧರಿ ತಿಳಿಸಿದ್ದಾರೆ.

‘ಅಫ್ಗಾನಿಸ್ತಾನ ತಂಡ ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ನ (ಐಸಿಸಿ) ಸದಸ್ಯತ್ವ ಹೊಂದಿದೆ. ಈ ತಂಡವನ್ನು ಬಲಪಡಿಸುವ ಉದ್ದೇಶದಿಂದ ಈ ತೀರ್ಮಾನ ಕೈಗೊಂಡಿದ್ದೇವೆ’ ಎಂದಿದ್ದಾರೆ.

ಅಫ್ಗಾನಿಸ್ತಾನ ತಂಡ ಭಾರತದ ವಿರುದ್ಧ ಮೊದಲ ಟೆಸ್ಟ್‌ ಪಂದ್ಯ ಆಡಲಿದೆ. ಈ ಐತಿಹಾಸಿಕ ಹೋರಾಟ ಜೂನ್‌ 14ರಿಂದ 18ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

‘ಅಫ್ಗಾನಿಸ್ತಾನದ ಆಟಗಾರರು ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ (ಐಪಿಎಲ್‌) ಮೋಡಿ ಮಾಡಿ ಕ್ರಿಕೆಟ್‌ ಲೋಕದ ಗಮನ ಸೆಳೆದಿದ್ದಾರೆ. ಮುಂದಿನ ದಿನಗಳಲ್ಲಿ ಈ ದೇಶದ ಇನ್ನಷ್ಟು ಆಟಗಾರರಿಗೆ ಲೀಗ್‌ನಲ್ಲಿ ಆಡಲು ಅವಕಾಶ ಮಾಡಿಕೊಡುತ್ತೇವೆ’ ಎಂದಿದ್ದಾರೆ.

‘ನಮ್ಮ ದೇಶದ ಕ್ರಿಕೆಟ್‌ ಬೆಳವಣಿಗೆಗೆ ಬಿಸಿಸಿಐ ಸಾಕಷ್ಟು ನೆರವು ನೀಡಿದೆ. ನಮಗಾಗಿ ಭಾರತದಲ್ಲಿ ಎರಡು ಕ್ರೀಡಾಂಗಣಗಳ ವ್ಯವಸ್ಥೆ ಮಾಡಿದೆ. ನಮ್ಮ ಆಟಗಾರರು ಅಭ್ಯಾಸ ನಡೆಸಲು ಮತ್ತು ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಲು ಇದರಿಂದ ಅನುಕೂಲವಾಗಿದೆ. ಇದಕ್ಕಾಗಿ ಬಿಸಿಸಿಐಗೆ ಆಭಾರಿಯಾಗಿದ್ದೇವೆ’ ಎಂದು ಅಫ್ಗಾನಿಸ್ತಾನ ಕ್ರಿಕೆಟ್‌ ಮಂಡಳಿಯ (ಎಸಿಬಿ) ಮುಖ್ಯಸ್ಥ ಆತಿಫ್‌ ಮಷಾಲ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT