ಹುಬ್ಬಳ್ಳಿ: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲಾಗುತ್ತಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಇಲ್ಲಿನ ಬಿವಿಬಿ ಕಾಲೇಜಿನ ಬಯೋಟೆಕ್ ಹಾಲ್‌ನಲ್ಲಿ ಶನಿವಾರ ನಡೆದ ಮೋದಿ@20 ಪುಸ್ತಕ ಬಿಡುಗಡೆ ಹಾಗೂ ಜನ ಕಲ್ಯಾಣ ಯೋಜನೆ ಚರ್ಚಾಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ಬಿಜೆಪಿ ಆಡಳಿತದಲ್ಲಿ ದೇಶ ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಿದೆ. 200 ವರ್ಷ ನಮ್ಮ ಮೇಲೆ ಬ್ರಿಟಿಷರು ದಬ್ಬಾಳಿಕೆ ನಡೆಸಿದ್ದರು. ಆದರೆ, ಇಂದು ಆರ್ಥಿಕ ಸದೃಢತೆಯಲ್ಲಿ ನಾವು ಇಂಗ್ಲೆಂಡ್‌ಗಿಂತಲೂ ಮುಂಚೂಣಿಯಲ್ಲಿದ್ದೇವೆ. ಮೋದಿ ಅವರು 20 ವರ್ಷಗಳಿಂದ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಗಾಂಧಿ ಕುಟುಂಬದ ಹೊರತಾಗಿ ಒಬ್ಬ ನಾಯಕ ಸುದೀರ್ಘ ಅವಧಿ ಆಡಳಿತ ನಡೆಸಿದ್ದರೆ, ಅದು ಮೋದಿ ಮಾತ್ರ. ಸದಾ ಹೊಸ ವಿಷಯಗಳನ್ನು ಕಲಿಯುವುದು, ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವುದರಲ್ಲಿ ಮೋದಿ ಮುಂಚೂಣಿಯಲ್ಲಿರುತ್ತಾರೆ’ ಎಂದರು.

ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ಅಶೋಕ ಶೆಟ್ಟರ್ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ಅವರು ಸಂಕಷ್ಟದ ಸಮಯದಲ್ಲಿ ಆಡಳಿತ ನಡೆಸುತ್ತಿದ್ದಾರೆ. ಸವಾಲುಗಳನ್ನು ಎದುರಿಸಿ ಅತ್ಯುತ್ತಮ ಆಡಳಿತ ನೀಡುತ್ತಿದ್ದಾರೆ’ ಎಂದರು.

ಕೆ.ಎಲ್.ಇ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕ ಶಂಕರಣ್ಣ ಮುನವಳ್ಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.