ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಆಡಳಿತದಲ್ಲಿ ದೇಶ ಸಾಲದಲ್ಲಿ ಮುಳುಗಿದೆ: ಲಾಡ್ ಆರೋಪ 

Published 2 ಮೇ 2024, 15:15 IST
Last Updated 2 ಮೇ 2024, 15:15 IST
ಅಕ್ಷರ ಗಾತ್ರ

ಕಲಘಟಗಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹತ್ತು ವರ್ಷದಲ್ಲಿ ದೇಶವನ್ನು ಸಾಲದಲ್ಲಿ ಮುಳುಗಿಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಆರೋಪಿಸಿದರು.

ತಾಲ್ಲೂಕಿನ ಮಿಶ್ರಿಕೋಟಿ ಗ್ರಾಮದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಪರ ಬಹಿರಂಗ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಅಪೂರ್ಣ ರಾಮಮಂದಿರ ಉದ್ಘಾಟನೆ ಮಾಡಿ ರಾಮನ ಹೆಸರಲ್ಲಿ ಮತ ಕೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಅಭಿವೃದ್ಧಿ ವಿಚಾರದ ಮೇಲೆ ಕೇಳುತ್ತಿದೆ. ದೇಶ ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಸೃಷ್ಟಿಯಾಗಿದೆ. ಬಿಜೆಪಿಗೆ ಪಾಠ ಕಲಿಸಲು ಜನರು ತುದಿಗಾಲಲ್ಲಿ ನಿಂತಿದ್ದಾರೆ. ಈ ಬಾರಿ ವಿನೋದ ಅಸೂಟಿಗೆ ನಿಮ್ಮ ಮತ ನೀಡಿ’ ಎಂದು ಅವರು ಕೋರಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥಗೌಡ ಮುರಳ್ಳಿ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಎಸ್.ಆರ್.‌ಪಾಟೀಲ, ಮಾಜಿ ಸದಸ್ಯ ವೈ.ಬಿ. ದಾಸನಕೊಪ್ಪ, ಸೋಮಶೇಖರ ಬೆನ್ನೂರ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಹನುಮಂತಗೌಡ ಪಾಟೀಲ, ಮುಖಂಡರಾದ ನರೇಶ ಮಲೇನಾಡು, ಬಿ.ವೈ. ಪಾಟೀಲ, ಬಾಬು ಅಂಚಟಗೇರಿ, ಶಿವಾನಂದ ಅಂಗಡಿ, ಗುರುನಾಥ ಕಂಪ್ಲಿ, ಗಂಗಾಧರ ಚಿಕ್ಕಮಠ, ಚಂಬಣ್ಣ ಜಾಬಿನ, ಹನುಮಂತ ಹರಿಜನ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT