ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲೇಜು ಆರಂಭ: ಮೊದಲ ದಿನ ನೀರಸ ಪ್ರತಿಕ್ರಿಯೆ

Last Updated 17 ನವೆಂಬರ್ 2020, 9:14 IST
ಅಕ್ಷರ ಗಾತ್ರ
ADVERTISEMENT
"ಹುಬ್ಬಳ್ಳಿಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ನಲ್ಲಿ ಸಿಬ್ಬಂದಿಗೆ ಕೋವಿಡ್ ಪರೀಕ್ಷೆ ಮಾಡಲಾಯಿತು"

ಹುಬ್ಬಳ್ಳಿ: ಕಾಲೇಜು ಆರಂಭದ ಮೊದಲ ದಿನವಾದ ಮಂಗಳವಾರ ನಗರದ ಬಹುತೇಕ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಬೆರಳೆಣಿಕೆಯಷ್ಟಿತ್ತು.

ಸರ್ಕಾರದ ಸೂಚನೆಯಂತೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಕೈಗಳಿಗೆ ಸ್ಯಾನಿಟೈಸರ್ ಸಿಂಪಡಿಸಿ ಒಳಕ್ಕೆ ಬಿಡಲಾಗುತ್ತಿತ್ತು.

ಮೂರುಸಾವಿರ ಮಠದ ಮಹಿಳಾ‌ ಕಾಲೇಜು, ಪಿ.ಸಿ‌. ಜಾಬಿನ ಕಾಲೇಜು, ಜೆ.ಜೆ. ಕಾಮರ್ಸ್ ಕಾಲೇಜು, ಮಹಿಳಾ ಪಾಲಿಟೆಕ್ನಿಕ್ ಸೇರಿದಂತೆ ಬಹುತೇಕ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೊದಲ ದಿನದ ಹಾಜರಿ ಕಡಿಮೆ ಇತ್ತು.

ಕೆಲವೆಡೆ ವಿದ್ಯಾರ್ಥಿಗಳು ಕೋವಿಡ್ ಪರೀಕ್ಷೆ ವರದಿಯನ್ನು ಸಲ್ಲಿಸಿದರೆ, ಉಳಿದೆಡೆ ಕಾಲೇಜುಗಳಲ್ಲಿ ಸಿಬ್ಬಂದಿ ಯೊಂದಿಗೆ, ವಿದ್ಯಾರ್ಥಿಗಳಿಗೂ ಕೋವಿಡ್ ಪರೀಕ್ಷೆ ಮಾಡಲಾಯಿತು.

ಹುಬ್ಬಳ್ಳಿಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ನಲ್ಲಿ ಸಿಬ್ಬಂದಿಗೆ ಕೋವಿಡ್ ಪರೀಕ್ಷೆ ಮಾಡಲಾಯಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT