ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಸೋಂಕಿತರ ಸಂಪರ್ಕವಿದ್ದರೆ ಮಕ್ಕಳಿಗೂ ಕೋವಿಡ್ ನೆಗೆಟಿವ್‌ ವರದಿ ಕಡ್ಡಾಯ

Last Updated 1 ಡಿಸೆಂಬರ್ 2021, 15:54 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರ ವ್ಯಾಪ್ತಿಯ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಪೋಷಕರು, ಸಂಬಂಧಿಕರು ಎಸ್‌ಡಿಎಂ ಆಸ್ಪತ್ರೆ ಸಿಬ್ಬಂದಿಯಾಗಿದ್ದರೆ ಅಥವಾ ಅಲ್ಲಿನ ಸೋಂಕಿತರ ಸಂಪರ್ಕ ಹೊಂದಿದ್ದರೆ ವಿದ್ಯಾರ್ಥಿಗಳು ಕಡ್ಡಾಯವಾಗಿ ಶಾಲೆಗೆ ಕೋವಿಡ್ ನೆಗೆಟಿವ್‌ ವರದಿ ತರಬೇಕು ಎಂದು ಹುಬ್ಬಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಕರಿಕಟ್ಟಿ ಆದೇಶ ಹೊರಡಿಸಿದ್ದಾರೆ.

ಇಲ್ಲಿನ ಜಿ.ವಿ. ಜೋಶಿ ರೋಟರಿ ಇಂಗ್ಲಿಷ್‌ ಮಾಧ್ಯಮ ಶಾಲೆಯ ವಿದ್ಯಾರ್ಥಿಗೆ ಕೋವಿಡ್‌ ದೃಢಪಟ್ಟ ಹಿನ್ನೆಲೆಯಲ್ಲಿ, ಅವರು ಕ್ರಮ ಕೈಗೊಂಡಿದ್ದಾರೆ. ಶಹರದ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಈ ನಿಟ್ಟಿನಲ್ಲಿ ನಿಗಾ ವಹಿಸಬೇಕು ಎಂದಿದ್ದಾರೆ.

ಇಂದು ಪರೀಕ್ಷೆ: ಕೋವಿಡ್‌ ದೃಢಪಟ್ಟ ವಿದ್ಯಾರ್ಥಿ ಸೋಮವಾರದ ತನಕ ಶಾಲೆಗೆ ಬಂದಿದ್ದು, ಪಾಸಿಟಿವ್‌ ಎಂದು ವರದಿ ಮಂಗಳವಾರ ರಾತ್ರಿ ಬಂದಿದೆ. ಆದ್ದರಿಂದ ಬುಧವಾರ ಶಾಲೆಯ 36 ಜನ ಸಿಬ್ಬಂದಿಯನ್ನು ಆರ್‌ಟಿಪಿಸಿಆರ್‌ ಪರೀಕ್ಷೆಗೆ ಒಳಪಡಿಸಲಾಯಿತು. ಗುರುವಾರ ಆ ವಿದ್ಯಾರ್ಥಿಯ ತರಗತಿಯಲ್ಲಿನ ಉಳಿದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗುವುದು ಎಂದು ಕರಿಕಟ್ಟಿ ತಿಳಿಸಿದರು.

ವಿದ್ಯಾರ್ಥಿಯ ಸಹೋದರಿ ಎಸ್‌ಡಿಎಂನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದು, ಅವರಿಗೆ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್‌ ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT