ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸೋಂಕಿತ ಆತ್ಮಹತ್ಯೆ

Last Updated 27 ಏಪ್ರಿಲ್ 2021, 16:56 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲ್ಲೂಕಿನ ಚಿಕ್ಕಕಬ್ಬಾರ ಗ್ರಾಮದ ಭೀಮಪ್ಪ ಯಲ್ಲಪ್ಪ ಕಮತರ (67) ಆತ್ಮಹತ್ಯೆ ಮಾಡಿಕೊಂಡವರು.

ಕುತ್ತಿಗೆ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಭೀಮಪ್ಪ ಅವರು, ಚಿಕಿತ್ಸೆಗಾಗಿ ಏ. 25ರಂದು ಕಿಮ್ಸ್‌ಗೆ ಬಂದಿದ್ದರು. ಆಸ್ಪತ್ರೆಯಲ್ಲಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದ ಅವರ ಫಲಿತಾಂಶ ಪಾಸಿಟಿವ್ ಬಂದಿತ್ತು.

ಕೋವಿಡ್ ವಾರ್ಡ್‌ಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲು ಸಿಬ್ಬಂದಿ ನಿರ್ಧರಿಸಿದ್ದರು. ವರದಿ ಪಾಸಿಟಿವ್ ಬಂದಿದ್ದರಿಂದ ಬೇಸರಗೊಂಡಿದ್ದ ಭೀಮ್ಮಪ್ಪ ಅಮದು ರಾತ್ರಿ ತಾವಿದ್ದ ವಾರ್ಡ್‌ನ ಕಿಟಕಿಗೆ ನೇಣು ಹಾಕಿಕೊಂಡಿದ್ದಾರೆ ಎಂದು ವಿದ್ಯಾನಗರ ಠಾಣೆ ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT