ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ– ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಬೆಲ್ಲದಗೆ ಕೋವಿಡ್ ಸೋಂಕು ದೃಢ

Last Updated 3 ಅಕ್ಟೋಬರ್ 2020, 16:54 IST
ಅಕ್ಷರ ಗಾತ್ರ

ಧಾರವಾಡ: ಹುಬ್ಬಳ್ಳಿ– ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರಿಗೆ ಕೋವಿಡ್–19 ದೃಢಪಟ್ಟಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಷಯ ಹಂಚಿಕೊಂಡಿರುವ ಬೆಲ್ಲದ, ‘ಕೋವಿಡ್ ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಯಾವುದೇ ರೋಗಲಕ್ಷಣಗಳು ಇಲ್ಲದಿದ್ದರೂ ವೈದ್ಯರ ಸಲಹೆಯಂತೆ ಗೃಹ ಆರೈಕೆಗೆ ಒಳಗಾಗಿದ್ದೇನೆ. ಈ ಕುರಿತು ಯಾರೂ ಭಯಪಡಿ’ ಎಂದು ಮನವಿ ಮಾಡಿಕೊಂಡಿದ್ದಾರೆ.

‘ಕಳೆದ ಹಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT