ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀರಾಮಸೇನೆ ಕೃತ್ಯಕ್ಕೆ ಸಿಪಿಐ ಖಂಡನೆ

Last Updated 11 ಏಪ್ರಿಲ್ 2022, 5:45 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಧಾರವಾಡ ಸಮೀಪದ ನುಗ್ಗಿಕೇರಿಯ ಹನುಮಾನ ದೇವಸ್ಥಾನದ ಬಳಿ ಹಣ್ಣಿನ ವ್ಯಾಪಾರಿ ಮೇಲೆ ದಾಳಿ ನಡೆಸಿದವರ ವಿರು‌ದ್ಧ ಕ್ರಮ ಕೈಗೊಳ್ಳಬೇಕು’ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ(ಎಂ) ಕಾರ್ಯದರ್ಶಿ ಮಹೇಶ ಪತ್ತಾರ ಆಗ್ರಹಿಸಿದ್ದಾರೆ.

‘ಸಣ್ಣ ವ್ಯಾಪಾರಿ ಮಾರಾಟ ಮಾಡುತ್ತಿದ್ದ ಕಲ್ಲಂಗಡಿ ಹಣ್ಣುಗಳನ್ನು ನಾಶಪಡಿಸಿದ ಶ್ರೀರಾಮಸೇನೆ ಕಾರ್ಯಕರ್ತರು ಹಾಗೂ ಅವರಿಗೆ ಮ್ಮಕ್ಕು ನೀಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಮುಸ್ಲಿಂ ವ್ಯಾಪಾರಿಗೆ ನಷ್ಟ ಪರಿಹಾರ ನೀಡಬೇಕು. ಅಲ್ಪಸಂಖ್ಯಾತರಿಗೆ ರಕ್ಷಣೆ ಒದಗಿಸಬೇಕು’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

‘ರಾಜ್ಯ ಸರ್ಕಾರವು ಇಂತಹ ಗುಂಡಾದಾಳಿಯನ್ನು ನಿಗ್ರಹಿಸಲಾಗದಷ್ಟು ದುರ್ಬಲವಾಗಿದೆ. ಆರ್‌ಎಸ್‍ಎಸ್ ನಿಯಂತ್ರಣಕ್ಕೆ ಸಿಲುಕಿರುವುದರಿಂದ ಮತಾಂಧ ಗುಂಡಾಗಳು ಬಹಿರಂಗ ದಾಳಿಗೆ ಮುಂದಾಗುತ್ತಿದ್ದಾರೆ. ಇದರಿಂದಾಗಿ ಅಮಾಯಕರು ಬಲಿಯಾಗುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾನೂನು ಸುವ್ಯವಸ್ಥೆ ಬಲಗೊಳಿಸಬೇಕು. ಇಲ್ಲವಾದರೆ ರಾಜೀನಾಮೆ ನೀಡಿ, ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಬೇಕು’ ಎಂದು ಸವಾಲು ಹಾಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT