ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರಿಕಾರ ಬೆಂಬಲಕ್ಕೆ ಸಿಪಿಐ

Last Updated 20 ಅಕ್ಟೋಬರ್ 2020, 13:10 IST
ಅಕ್ಷರ ಗಾತ್ರ

ಹುಬ್ಬಳ್ಳಿ: ವಿಧಾನ ಪರಿಷತ್‌ ಸದಸ್ಯತ್ವ ಸ್ಥಾನಕ್ಕೆ ನಡೆಯುವ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಸವರಾಜ ಗುರಿಕಾರ ಅವರಿಗೆ ಸಿಪಿಐ ಮತ್ತು ಸಿಪಿಐ (ಎಂ) ಪಕ್ಷಗಳು ಬೆಂಬಲ ಸೂಚಿಸಿವೆ.

ಸಿಪಿಐ (ಎಂ) ಜಿಲ್ಲಾ ಘಟಕದ ಕಾರ್ಯದರ್ಶಿ ಮಹೇಶ ಪತ್ತಾರ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ವಿವಿಧ ಕ್ಷೇತ್ರಗಳಿಂದ ವಿಧಾನಪರಿಷತ್‌ಗೆ ಆಯ್ಕೆಯಾಗುವ ಸದಸ್ಯರಿಗೆ ಆಯಾ ಕ್ಷೇತ್ರದ ಬಗ್ಗೆ ಆಳವಾದ ಅನುಭವ ಮತ್ತು ಜ್ಞಾನ ಇರಬೇಕಾಗುತ್ತದೆ. ಇದುವರೆಗೆ ಆಯ್ಕೆಯಾದವರಲ್ಲಿ ಬಹುತೇಕರು ನೈಜ ಸಮಸ್ಯೆಗೆ ಪರಿಹಾರ ಹುಡುಕುವಲ್ಲಿ, ಸರ್ಕಾರದ ಮೇಲೆ ಒತ್ತಡ ಹೇರುವಲ್ಲಿ ವಿಫಲರಾಗಿದ್ದಾರೆ. ಸಂಘಟನೆ ಮತ್ತು ಹೋರಾಟದ ಹಿನ್ನಲೆ ಇರುವ ಗುರಿಕಾರ ಅವರನ್ನು ಬೆಂಬಲಿಸುತ್ತೇವೆ. ಮತದಾರರು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಬೇಕು’ ಎಂದು ಕೋರಿದರು.

‘ಗುರಿಕಾರ ಅವರಿಗೆ ನೌಕರರ ಸಮಸ್ಯೆಗಳು, ನಿರುದ್ಯೋಗಿ ಪದವೀಧರರ ಸಂಕಷ್ಟಗಳ ಬಗ್ಗೆ ಸ್ಪಷ್ಟ ಕಲ್ಪನೆಯಿದೆ. ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯವಿದೆ. ಆದ್ದರಿಂದ ಅವರನ್ನು ಬೆಂಬಲಿಸಬೇಕು’ ಎಂದರು.

ಸಿಪಿಐ (ಎಂ) ಮುಖಂಡ ಬಿ.ಎಸ್‌. ಸೊಪ್ಪಿನ, ಸಿಪಿಐನ ಜಿಲ್ಲಾ ಕಾರ್ಯದರ್ಶಿ ಬಸೀರ ಮುಧೋಳ, ಮುಖಂಡ ದೇವಾನಂದ ಜಗಾಪುರ ಮತ್ತು ಕನ್ನಡಪರ ಹೋರಾಟಗಾರ ಅಮೃತ ಇಜಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT