ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಲ್ಲೂಕುವಾರು ಸಮಿತಿ ರಚಿಸಿ: ಜೆಡಿಎಸ್‌ ಮುಖಂಡರ ಪೂರ್ವಭಾವಿ ಸಭೆ

ಚುನಾವಣೆ: ಜೆಡಿಎಸ್‌ ಮುಖಂಡರ ಪೂರ್ವಭಾವಿ ಸಭೆ
Last Updated 25 ಮೇ 2022, 2:57 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಶ್ರೀಶೈಲ ನಿಂಗಪ್ಪ ಗಡದಿನ್ನಿ ಅವರ ಗೆಲುವಿಗೆ ಎಲ್ಲರೂ ದುಡಿಯಬೇಕು. ಮತಕ್ಷೇತ್ರ ವ್ಯಾಪ್ತಿಯ ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ತಾಲ್ಲೂಕು ಮಟ್ಟದಲ್ಲಿ ಸಮಿತಿಗಳನ್ನು ರಚಿಸಬೇಕು ಎಂದು ಜೆಡಿಎಸ್‌ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಗುರುರಾಜ ಹುಣಸಿಮರದ ಹೇಳಿದರು.

ಮಂಗಳವಾರ ನಾಲ್ಕೂ ಜಿಲ್ಲೆಗಳ ಪ್ರಮುಖರ ಜೊತೆ ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ‘ಪಶ್ಚಿಮ ಶಿಕ್ಷಕರ ಕ್ಷೇತ್ರ ನಮ್ಮ ಪಕ್ಷದ ಸ್ಥಾನವಾಗಿದೆ. ಹೀಗಾಗಿ ಅಭ್ಯರ್ಥಿ ಗೆಲುವಿಗೆ ಹಗಲಿರುಳು ಶ್ರಮಿಸಬೇಕು. ಶ್ರೀಶೈಲ ಗಡದಿನ್ನಿ ಅವರು ಆರೇಳು ತಿಂಗಳಿನಿಂದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. 8–10 ಸಾವಿರ ಮತದಾರರನ್ನು ಸೇರ್ಪಡೆ ಮಾಡಿದ್ದಾರೆ’ ಎಂದರು.

ರಾಜ್ಯ ಘಟಕದ ಉಪಾಧ್ಯಕ್ಷ ತಬರೇಜ ಸಂಶಿ, ಗದಗ ಜಿಲ್ಲಾ ಘಟಕದ ಅಧ್ಯಕ್ಷ ಅಂದಾನಯ್ಯ ಕುರ್ತಕೋಟಿಮಠ, ಹಜರತ್ ಅಲಿ ಜೋಡಮನಿ, ಮಹಿಳಾ ಘಟಕದ ಅಧ್ಯಕ್ಷೆ ರೇಖಾ ನಾಯ್ಕರ, ಗುರುರಾಜ ತೋಟದ, ದೇವರಾಜ ಕಂಬಳಿ, ಸಿ ಎನ್ ನಾಡಗೌಡ, ಶಾಂತವೀರಪ್ಪ ಬೆಟಗೇರಿ, ಗಂಗಾಧರ ಪೆರೂರ, ಫತೇಶಾ ಯರಗಟ್ಟಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್‌ ಅಭ್ಯರ್ಥಿ ಶ್ರೀಶೈಲ ಮಾತನಾಡಿ ‘ಶಿಕ್ಷಣ ಕ್ಷೇತ್ರ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಭ್ರಷ್ಟಾಚಾರ ರಹಿತ ಶಿಕ್ಷಣ ಇಲಾಖೆ ಮಾಡುವ ಉದ್ದೇಶದಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಮೇ 25ರಂದು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT