ಶನಿವಾರ, ಮೇ 21, 2022
23 °C
14 ವರ್ಷದ ಒಳಗಿನವರ ಅಂತರ ಕ್ಯಾಂಪ್‌ಗಳ ಕ್ರಿಕೆಟ್‌

ಬಿಡಿಕೆ, ಎಚ್‌ಎಸ್‌ಸಿ ತಂಡಗಳಿಗೆ ಜಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಬಿಡಿಕೆ ಸ್ಪೋರ್ಟ್ಸ್ ಫೌಂಡೇಷನ್‌ ಮತ್ತು ಹುಬ್ಬಳ್ಳಿ ಸ್ಪೋರ್ಟ್‌ ಕ್ಲಬ್‌ (ಎಚ್‌ಎಸ್‌ಸಿ) ತಂಡಗಳು ಲೀಲಾವತಿ ಪ್ಯಾಲೇಸ್‌ ಕಪ್‌ 14 ವರ್ಷದ ಒಳಗಿನವರ ಅಂತರ ಕ್ಯಾಂಪ್‌ಗಳ ಕ್ರಿಕೆಟ್‌ ಟೂರ್ನಿಯ ಭಾನುವಾರದ ಪಂದ್ಯದಲ್ಲಿ ಗೆಲುವು ಸಾಧಿಸಿದವು.

ಚಾಂಪಿಯನ್ಸ್‌ ನೆಟ್‌ ಕ್ರಿಕೆಟ್‌ ಕೋಚಿಂಗ್‌ ಸೆಂಟರ್‌ ಆಯೋಜಿಸಿರುವ ಟೂರ್ನಿಯ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಬಿಡಿಕೆ 30 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 179 ರನ್‌ ಗಳಿಸಿತ್ತು. ಭುವನ ಬಿ. (ಔಟಾಗದೆ 100, 98 ಎಸೆತ) ಮತ್ತು ಗಣೇಶ (50) ಉತ್ತಮ ಬ್ಯಾಟಿಂಗ್‌ ಇದಕ್ಕೆ ಕಾರಣವಾಯಿತು. ಎದುರಾಳಿ ತೇಜಲ್‌ ಶಿರಗುಪ್ಪಿ ಕ್ರಿಕೆಟ್‌ ಅಕಾಡೆಮಿ 30 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 120 ರನ್‌ ಗಳಿಸಲಷ್ಟೇ ಶಕ್ತವಾಯಿತು. ಹೀಗಾಗಿ ಬಿಡಿಕೆಗೆ 59 ರನ್‌ಗಳ ಗೆಲುವು ಸಾಧ್ಯವಾಯಿತು.

ಇನ್ನೊಂದು ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಎಚ್‌ಎಸ್‌ಸಿ ತಂಡ 27 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 146 ರನ್‌ ಗಳಿಸಿತು. ಆಯುಷ್ ಪಾಟೀಲ (84) ಅರ್ಧಶತಕ ಇದಕ್ಕೆ ಕಾರಣವಾಯಿತು. ಎದುರಾಳಿ ಧಾರವಾಡದ ವಿಎಂಸಿಎ 27 ಓವರ್‌ಗಳಲ್ಲಿ ಮೂರು ವಿಕೆಟ್‌ ಕಳೆದುಕೊಂಡು 81 ರನ್‌ ಗಳಿಸಿ ತನ್ನ ಹೋರಾಟ ಮುಗಿಸಿತು. ಇದರಿಂದ ಎಚ್‌ಎಸ್‌ಸಿ 65 ರನ್‌ಗಳ ಜಯ ತನ್ನದಾಗಿಸಿಕೊಂಡಿತು.

ಮತ್ತೊಂದು ಪಂದ್ಯದಲ್ಲಿ ಬೆಳಗಾವಿ ಸ್ಪೋರ್ಟ್ಸ್‌ ಕ್ಲಬ್‌ 21 ರನ್‌ಗಳ ಗೆಲುವು ಪಡೆಯಿತು. ಮೊದಲು ಬ್ಯಾಟ್‌ ಮಾಡಿದ ಈ ತಂಡ 30 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 123 ರನ್ ಕಲೆಹಾಕಿತ್ತು. ಎದುರಾಳಿ ಶ್ರೀ ದುರ್ಗಾ ಸ್ಪೋರ್ಟ್ಸ್ ಅಕಾಡೆಮಿ 29.3 ಓವರ್‌ಗಳಲ್ಲಿ 102 ರನ್‌ ಗಳಿಸಿ ಅಲೌಟ್‌ ಆಯಿತು.

ಬೆಳಗಾವಿಯ ಯುನಿಯನ್‌ ಜಿಮ್ಖಾನಾ ತಂಡ 30 ಓವರ್‌ಗಳಲ್ಲಿ ಎಂಟು ವಿಕೆಟ್‌ ಕಳೆದುಕೊಂಡು ಗಳಿಸಿದ್ದ 134 ರನ್‌ಗಳನ್ನು ಕಲೆಹಾಕಲು ಎದುರಾಳಿ ಆನಂದ ಕ್ರಿಕೆಟ್‌ ಕೋಚಿಂಗ್‌ ಅಕಾಡೆಮಿ ವಿಫಲವಾಯಿತು. ಈ ತಂಡ ಅಂತಿಮವಾಗಿ 20.4 ಓವರ್‌ಗಳಲ್ಲಿ 65 ರನ್‌ ಗಳಿಸಿ ಆಲೌಟ್‌ ಆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು