ಮಂಗಳವಾರ, ಅಕ್ಟೋಬರ್ 27, 2020
26 °C
ಮುಂದುವರಿದ ಪೊಲೀಸರ ಕಾರ್ಯಾಚರಣೆ

ಕ್ರಿಕೆಟ್ ಬೆಟ್ಟಿಂಗ್‌: ₹7.75 ಲಕ್ಷ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ / ಹುಬ್ಬಳ್ಳಿ: ಯುನೈಟೆಡ್‌ ಅರಬ್‌ ಎಮಿರೇಟ್ಸ್‌ನಲ್ಲಿ ನಡೆಯುತ್ತಿರುವ ಐಪಿಎಲ್‌ ಕ್ರಿಕೆಟ್ ಟೂರ್ನಿಯ ಪಂದ್ಯಗಳ ಬಗ್ಗೆ ಬೆಟ್ಟಿಂಗ್‌ ದಂಧೆಯ ಮೇಲೆ ಕಾರ್ಯಾಚರಣೆ ಮುಂದುವರಿಸಿರುವ ಪೊಲೀಸರು ಅವಳಿ ನಗರಗಳಲ್ಲಿ ಒಟ್ಟು ₹7.75 ಲಕ್ಷ ಹಣ ವಶಪಡಿಸಿಕೊಂಡು, ಆರು ಜನರನ್ನು ಬಂಧಿಸಿದ್ದಾರೆ.

ಧಾರವಾಡದ ಸಪ್ತಾಪುರ ಬಡಾವಣೆಯಲ್ಲಿ ತಾಲ್ಲೂಕಿನ ಸಲಕಿನಕೊಪ್ಪ ಗ್ರಾಮದ ಅವಿನಾಶ ಉರ್ಫ್ ಅವಿ ಅಶೋಕ ಚವ್ಹಾಣ ಮತ್ತು ಕೆಲಗೇರಿ ಆಂಜನೇಯ ನಗರದ ಮಂಜುನಾಥ ಬಸಪ್ಪ ವಾಲೀಕಾರ ಅವರನ್ನು ಉಪನಗರ ಠಾಣೆಯ ಪೊಲೀಸರು ಶನಿವಾರ ಬಂಧಿಸಿ ₹7.60 ಲಕ್ಷ ನಗದು, ಮೂರು ಮೊಬೈಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳು ಸಪ್ತಾಪೂರ ಬಡಾವಣೆಯ ಸ್ಪಂದನಾ ಆಸ್ಪತ್ರೆಯ ಬಳಿ ರಸ್ತೆ ಬದಿಯಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದರು. ಎಸಿಪಿ ಜಿ.ಅನುಷಾ ಅವರ ಮಾರ್ಗದರ್ಶನದಲ್ಲಿ ಉಪನಗರ ಠಾಣೆಯ ಸಿಪಿಐ ಪ್ರಮೋದ ಯಲಿಗಾರ ಅವರ ನೇತೃತ್ವದಲ್ಲಿ ಪಿಎಸ್‌ಐ ಶ್ರೀಮಂತ ಹುಣಸಿಕಟ್ಟಿ, ಸಿಬ್ಬಂದಿ ಬಸವರಾಜ ಮಾಗುಂಡನವರ, ಕೆ.ಎಂ.ಡೊಕ್ಕನವರ, ಆರ್.ಎಚ್.ಬಡ್ನಿ, ಯು.ಡಿ.ಬಂಗಾರಿ, ಚೇತನ ಇಂಗಳಗಾವಿ ಮತ್ತು ಆನಂದ ಬಡಿಗೇರ ದಾಳಿ ನಡೆಸಿದೆ.

ಹುಬ್ಬಳ್ಳಿ–ಗದಗ ರಸ್ತೆಯಲ್ಲಿ ರೈಲ್ವೆ ವರ್ಕ್‌ ಶಾಪ್‌ ಮುಂದೆ ಕೋಲ್ಕತ್ತ ನೈಟ್‌ ರೈಡರ್ಸ್‌ ಮತ್ತು ಕಿಂಗ್ಸ್ ಇಲೆವೆನ್‌ ಪಂಜಾಬ್ ತಂಡಗಳ ನಡುವಿನ ಪಂದ್ಯದ ವೇಳೆ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಲಾಗಿದೆ. ಅವರಿಂದ ₹15,800 ಹಣ ಮತ್ತು ಮೂರು ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅರವಿಂದ ನಗರದ ಕಿಶನ್‌ ಜರತಾರಘರ, ಕೇಶ್ವಾಪುರದ ಶಬ್ಬೀರ ಹೊಸಪೇಟೆ, ಸಿದ್ದಾರ್ಥ ಕಾಲೊನಿಯ ಪವನ ಹಿರೇಮನಿ ಮತ್ತು ಆನಂದ ನಗರದ ಸುರೇಶ ಬುರಬುರೆ ಬಂಧಿತರು.

ಅಕ್ರಮ ಮದ್ಯ ಸಾಗಾಟ: ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟಕ್ಕೆ ಮುಂದಾದ ಆರೋಪದ ಮೇಲೆ ಸವದತ್ತಿ ತಾಲ್ಲೂಕಿನ ಉಗರಗೋಳ ಗ್ರಾಮದ ಭೀಮಪ್ಪ ಜಾಡರ ಎಂಬಾತನನ್ನು ಘಂಟಿಕೇರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತನಿಂದ ₹14,460 ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ.

ನಗರದ ಕೋಯಿನ್‌ ಮಾಲ್‌ ಹಿಂದುಗಡೆ ಸಾರ್ವಜನಿಕ ಸ್ಥಳದಲ್ಲಿ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿದ ಹುಬ್ಬಳ್ಳಿ ಶಹರ ಪೊಲೀಸರು ಹತ್ತು ಜನರನ್ನು ಬಂಧಿಸಿ ₹4,936 ನಗದು ವಶಪಡಿಸಿಕೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು