ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ | ಕ್ರಿಕೆಟ್ ಬೆಟ್ಟಿಂಗ್; ಆರು ಜನರ ಬಂಧನ

Published 15 ಅಕ್ಟೋಬರ್ 2023, 7:21 IST
Last Updated 15 ಅಕ್ಟೋಬರ್ 2023, 7:21 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಪ್ರತ್ಯೇಕ ಅಡ್ಡೆಗಳ ಮೇಲೆ ದಾಳಿ ನಡೆಸಿದ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಆರು ಜನ ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ₹17,500 ವಶಪಡಿಸಿಕೊಂಡಿದ್ದಾರೆ.

ಶನಿವಾರ ನಡೆದ ವಿಶ್ವಕಪ್ ಕ್ರಿಕೆಟ್ ನ ಭಾರತ -ಪಾಕಿಸ್ತಾನ ಪಂದ್ಯದ ವೇಳೆ ಆರೋಪಿಗಳು ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದರು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಹೆಗ್ಗೇರಿಯ ಸಿದ್ಧಾರೂಢ ನಗರ, ಅರವಿಂದ ನಗರದ ಹಾಗೂ ಆನಂದ ನಗರದ ಅಡ್ಡೆಗಳ ಮೇಲೆ ದಾಳಿ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT