ಭಾನುವಾರ, ಏಪ್ರಿಲ್ 11, 2021
21 °C

ಕ್ರಿಕೆಟ್‌: ಬಿಎಸ್‌ಸಿ, ಬಿಡಿಕೆ ಜಯಭೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಬೆಳಗಾವಿ ಸ್ಪೋರ್ಟ್ಸ್‌ ಕ್ಲಬ್‌ (ಬಿಎಸ್‌ಸಿ) ‘ಎ’ ಹಾಗೂ ಹುಬ್ಬಳ್ಳಿಯ ಬಿಡಿಕೆ ಸ್ಪೋರ್ಟ್ಸ್ ಫೌಂಡೇಷನ್‌ ‘ಎ’ ತಂಡಗಳು, ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಆಯೋಜಿಸಿರುವ ಧಾರವಾಡ ವಲಯದ ಮೊದಲ ಡಿವಿಷನ್‌ ಕ್ರಿಕೆಟ್‌ ಟೂರ್ನಿಯ ತನ್ನ ಮೊದಲ ಪಂದ್ಯಗಳಲ್ಲಿ ಜಯಭೇರಿ ಮೊಳಗಿಸಿದವು.

ಇಲ್ಲಿನ ರಾಜನಗರದ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಬೆಳಗಾವಿಯ ಯೂನಿಯನ್‌ ಜಿಮ್ಖಾನಾ ತಂಡ 31.5 ಓವರ್‌ಗಳಲ್ಲಿ 107 ರನ್‌ ಗಳಿಸಿ ಆಲೌಟ್‌ ಆಯಿತು. ಸಾಧಾರಣ ಮೊತ್ತದ ಗುರಿಯನ್ನು ಎದುರಾಳಿ ಬಿಡಿಕೆ ತಂಡ 20.5 ಓವರ್‌ಗಳಲ್ಲಿ ತಲುಪಿ ನಾಲ್ಕು ವಿಕೆಟ್‌ಗಳ ಗೆಲುವು ದಾಖಲಿಸಿತು. ಈ ತಂಡದ ಇಮ್ರಾನ್‌ ಕೆ. ನಾಲ್ಕು, ಕೃಷ್ಣ ಬಗಾಡಿ ಮೂರು ಮತ್ತು ಅನೀಶ್ ಭೂಸದ ಎರಡು ವಿಕೆಟ್‌ಗಳನ್ನು ಕಬಳಿಸಿದರು.

ಬೆಳಗಾವಿಯ ಕೆಎಸ್‌ಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್ ಮಾಡಿದ ಧಾರವಾಡದ ಎಸ್‌ಡಿಎಂ ಕ್ರಿಕೆಟ್‌ ಅಕಾಡೆಮಿ ‘ಎ’ ತಂಡ 37.2 ಓವರ್‌ಗಳಲ್ಲಿ 143 ರನ್‌ ಗಳಿಸಿತು. ಎದುರಾಳಿ ಬಿಎಸ್‌ಸಿ ತಂಡ 22.4 ಓವರ್‌ಗಳಲ್ಲಿ ಎರಡು ವಿಕೆಟ್‌ ಕಳೆದುಕೊಂಡು ಗುರಿ ತಲುಪಿತು. ಈ ತಂಡದ ಸ್ವಪ್ನಿಲ್ ಯಳವೆ (83) ಬ್ಯಾಟಿಂಗ್‌ನಲ್ಲಿ ಮಿಂಚಿದರೆ, ಶುಭಂ ಗೌಂಡ್‌ಕರ್‌ ನಾಲ್ಕು ವಿಕೆಟ್‌ ಪಡೆದು ಬೌಲಿಂಗ್‌ನಲ್ಲಿ ಗಮನ ಸೆಳೆದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು