ಶುಕ್ರವಾರ, ಮೇ 27, 2022
26 °C

ಕ್ರಿಕೆಟ್‌: ಸಿಸಿಕೆ ತಂಡಕ್ಕೆ 219 ರನ್‌ ಗೆಲುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಆರಂಭಿಕ ಬ್ಯಾಟ್ಸ್‌ಮನ್‌ ಶ್ರೇಯಸ್‌ ಮುರ್ಡೇಶ್ವರ (155, 150ಎಸೆತ, 25ಬೌಂಡರಿ) ಶತಕ ಹಾಗೂ ಸಂತೋಷ ಲಮಾಣಿ (23ಕ್ಕೆ6) ಚುರುಕಿನ ಬೌಲಿಂಗ್‌ ಬಲದಿಂದ ಧಾರವಾಡದ ಸಿಸಿಕೆ ‘ಬಿ’ ತಂಡ, ಕೆಎಸ್‌ಸಿಎ ಎರಡನೇ ಡಿವಿಷನ್‌ ಕ್ರಿಕೆಟ್‌ ಟೂರ್ನಿಯ ಗುರುವಾರದ ಪಂದ್ಯದಲ್ಲಿ 219 ರನ್‌ಗಳ ಭರ್ಜರಿ ಗೆಲುವು ಪಡೆಯಿತು.

ಇಲ್ಲಿನ ರೈಲ್ವೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಸಿಸಿಕೆ 50 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 309 ರನ್‌ ಗಳಿಸಿತು. ಶ್ರೇಯಸ್‌ ಶತಕದ ಜೊತೆಗೆ ಯಶಸ್‌ ಕುರುಬರ (57) ಅರ್ಧಶತಕ ತಂಡದ ಉತ್ತಮ ಮೊತ್ತಕ್ಕೆ ಕಾರಣವಾಯಿತು. ಎದುರಾಳಿ ಬೆಳಗಾವಿಯ ಇಂಡಿಯನ್‌ ಬಾಯ್ಸ್‌ ತಂಡ 21.2 ಓವರ್‌ಗಳಲ್ಲಿ 90 ರನ್ ಗಳಿಸಿ ಆಲೌಟ್‌ ಆಯಿತು.

ಕೆಎಸ್‌ಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬೆಳಗಾವಿಯ ವಿಜಯ ಕ್ರಿಕೆಟ್‌ ಅಕಾಡೆಮಿ ನಾಲ್ಕು ರನ್‌ಗಳ ಗೆಲುವು ಸಾಧಿಸಿತು. ಮೊದಲು ಬ್ಯಾಟ್‌ ಮಾಡಿ ಈ ತಂಡ ಕಲೆಹಾಕಿದ್ದ 84 ರನ್‌ ಗುರಿಗೆ ಉತ್ತರವಾಗಿ ಎದುರಾಳಿ ಭಟ್ಕಳ ಸ್ಪೋರ್ಟ್ಸ್‌ ಕ್ಲಬ್‌ 20.1 ಓವರ್‌ಗಳಲ್ಲಿ 80 ರನ್ ಗಳಿಸಿ ಗೆಲುವಿನ ಸನಿಹ ಬಂದು ಆಲೌಟ್‌ ಆಯಿತು. ಬೆಳಗಾವಿಯ ಶುಭಮ್‌ ಭಡ್ವಂಕರ ಆರು ವಿಕೆಟ್‌ ಕಬಳಿಸಿದರು.

ಬೆಳಗಾವಿಯ ಕೆಎಸ್‌ಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಅಲ್ಲಿನ ನೀನಾ ಸ್ಪೋರ್ಟ್ಸ್‌ ಕ್ಲಬ್‌ ‘ಎ’ ತಂಡ ಆರು ವಿಕೆಟ್‌ಗಳ ಗೆಲುವು ಪಡೆಯಿತು. ಮೊದಲು ಬ್ಯಾಟ್ ಮಾಡಿದ್ದ ಹುಬ್ಬಳ್ಳಿ ಕ್ರಿಕೆಟ್‌ ಅಕಾಡೆಮಿ ‘ಬಿ’ 50 ಓವರ್‌ಗಳಲ್ಲಿ ನೀಡಿದ್ದ 237 ರನ್‌ ಗುರಿಯನ್ನು ನೀನಾ ತಂಡ 33.2 ಓವರ್‌ಗಳಲ್ಲಿ ಮುಟ್ಟಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು