ಹುಬ್ಬಳ್ಳಿ: ಅಲ್ಪ ಮೊತ್ತದ ಗುರಿಯನ್ನು ಸುಲಭವಾಗಿ ಮುಟ್ಟಿದ ಚಾಂಪಿಯನ್ಸ್ ನೆಟ್ ಕ್ರಿಕೆಟ್ ಅಕಾಡೆಮಿ ತಂಡ ಆರ್ಐಎಸ್ ಟ್ರೋಫಿ 14 ವರ್ಷದ ಒಳಗಿನವರ ಅಂತರ ಕ್ಯಾಂಪ್ ಕ್ರಿಕೆಟ್ ಟೂರ್ನಿಯ ಶುಕ್ರವಾರದ ಪಂದ್ಯದಲ್ಲಿ ಹತ್ತು ವಿಕೆಟ್ಗಳ ಗೆಲುವು ಸಾಧಿಸಿತು.

ಇಲ್ಲಿನ ರೈಲ್ವೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಐಎಸ್ ತಂಡ 57 ರನ್ ಕಲೆಹಾಕಿತ್ತು. ಎರಡು ವಿಕೆಟ್ ಕಬಳಿಸಿ ಅಜೇಯ 30 ರನ್ ಗಳಿಸಿ ಆಲ್ರೌಂಡ್ ಪ್ರದರ್ಶನ ನೀಡಿ ಹೇತ್ ಪಟೇಲ ಪಂದ್ಯ ಶ್ರೇಷ್ಠ ಗೌರವಕ್ಕೆ ಭಾಜನರಾದರು.

ದಿನದ ಇನ್ನೊಂದು ಪಂದ್ಯದಲ್ಲಿ ತೇಜಲ್ ಶಿರಗುಪ್ಪಿ ಕ್ರಿಕೆಟ್ ಅಕಾಡೆಮಿ (ಟಿಎಸ್ಸಿಎ) ಮೂರು ವಿಕೆಟ್ಗಳ ಜಯ ಪಡೆಯಿತು. ಮೊದಲು ಬ್ಯಾಟ್ ಮಾಡಿದ ಫಸ್ಟ್ ಕ್ರಿಕೆಟ್ ಅಕಾಡೆಮಿ 114 ರನ್ಗಳನ್ನು ಕಲೆಹಾಕಿತು. ಈ ಗುರಿಯನ್ನು ಟಿಎಸ್ಸಿಎ ಐದು ವಿಕೆಟ್ಗಳನ್ನು ಕಳೆದುಕೊಂಡು ತಲುಪಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.