ಗುರುವಾರ , ಮೇ 13, 2021
34 °C

ಕ್ರಿಕೆಟ್‌: ಧಾರವಾಡದ ಸಿಸಿಕೆ ಜಯಭೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಸವಾಲಿನ ಮೊತ್ತ ಕಲೆಹಾಕಿದ ಧಾರವಾಡದ ಕ್ರಿಕೆಟ್‌ ಕ್ಲಬ್‌ ಆಫ್‌ ಕರ್ನಾಟಕ (ಸಿಸಿಕೆ) ‘ಬಿ’ ತಂಡ, ಕೆಎಸ್‌ಸಿಎ ಧಾರವಾಡ ವಲಯ ಆಯೋಜಿಸಿರುವ ಎರಡನೆ ಡಿವಿಷನ್‌ ಕ್ರಿಕೆಟ್ ಟೂರ್ನಿಯ ಗುರುವಾರದ ಪಂದ್ಯದಲ್ಲಿ 237 ರನ್‌ಗಳ ಭರ್ಜರಿ ಗೆಲುವು ಸಾಧಿಸಿತು.

ರಾಜನಗರದ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಸಿಸಿಕೆ 50 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 301 ರನ್‌ ಗಳಿಸಿತು. ರಾಜ್ವೀರ್‌ ವಾದ್ವಾ (56) ಹಾಗೂ ಕಿಶೋರ ಶೆಟ್ಟಿ (64) ಅವರ ಅರ್ಧಶತಕಗಳ ಬ್ಯಾಟಿಂಗ್‌ ಇದಕ್ಕೆ ಕಾರಣವಾಯಿತು. ಎದುರಾಳಿ ಬೆಳಗಾವಿಯ ಇಂಡಿಯನ್ ಬಾಯ್ಸ್‌ ತಂಡ 17.1 ಓವರ್‌ಗಳಲ್ಲಿ 64 ರನ್‌ ಗಳಿಸಲಷ್ಟೇ ಶಕ್ತವಾಯಿತು. ಸಿಸಿಕೆ ತಂಡದ ಬಲಗೈ ಮಧ್ಯಮವೇಗಿ ರೋಹನ್‌ ನಿಂಗಸಾನಿ ಐದು ವಿಕೆಟ್‌ ಕಬಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.‌

ಬೆಳಗಾವಿಯಲ್ಲಿ ನಡೆದ ಪಂದ್ಯದಲ್ಲಿ ಹುಬ್ಬಳ್ಳಿಯ ಟ್ಯಾಲೆಂಟ್‌ ಸ್ಪೋರ್ಟ್ಸ್‌ ಅಕಾಡೆಮಿ ಮೊದಲು ಬ್ಯಾಟ್ ಮಾಡಿ 42 ಓವರ್‌ಗಳಲ್ಲಿ 172 ರನ್ ಗಳಿಸಿತು. ಈ ಗುರಿಯನ್ನು ಎದುರಾಳಿ ಬೆಳಗಾವಿಯ ನೀನಾ ಸ್ಪೋರ್ಟ್ಸ್‌ ಕ್ಲಬ್‌ 32.2 ಓವರ್‌ಗಳಲ್ಲಿ ಆರು ವಿಕೆಟ್‌ ಕಳೆದುಕೊಂಡು ಮುಟ್ಟಿತು.

ಬೆಳಗಾವಿಯ ಯೂನಿಯನ್‌ ಜಿಮ್ಖಾನ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕುಂದಾನಗರಿಯ ಆನಂದ ಕ್ರಿಕೆಟ್‌ ಅಕಾಡೆಮಿ 121 ರನ್‌ಗಳ ಗೆಲುವು ದಾಖಲಿಸಿತು. ಮೊದಲು ಬ್ಯಾಟ್‌ ಮಾಡಿದ ಈ ತಂಡ 50 ಓವರ್‌ಗಳಲ್ಲಿ 256 ರನ್‌ ಗಳಿಸಿತ್ತು. ಎದುರಾಳಿ ವಿಜಯ ಕ್ರಿಕೆಟ್‌ ಅಕಾಡೆಮಿ 28.3 ಓವರ್‌ಗಳಲ್ಲಿ 135 ರನ್‌ ಗಳಿಸಿ ಆಲೌಟ್‌ ಆಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.