ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್‌: ಫೈನಲ್‌ಗೆ ಎಚ್‌ಸಿಎ, ಕೋಲ್ಟ್ಸ್‌

Last Updated 5 ಮಾರ್ಚ್ 2021, 12:40 IST
ಅಕ್ಷರ ಗಾತ್ರ

ಹುಬ್ಬಳ್ಳಿ: ತನ್ನ ಕೊನೆಯ ಲೀಗ್‌ ಪಂದ್ಯದಲ್ಲಿ ಐದು ವಿಕೆಟ್‌ಗಳ ಗೆಲುವು ದಾಖಲಿಸಿದ ಹುಬ್ಬಳ್ಳಿ ಕೋಲ್ಟ್ಸ್‌ ತಂಡ ರೈಲ್ವೆ ಇನ್‌ಸ್ಟಿಟ್ಯೂಟ್‌ ಆಫ್‌ ಸೌತ್‌ ‌(ಆರ್‌ಐಎಸ್‌) ಹುಬ್ಬಳ್ಳಿ ವಿಭಾಗ ಹಮ್ಮಿಕೊಂಡಿರುವ 12 ವರ್ಷದೊಳಗಿನವರ ಅಂತರ ಕ್ಯಾಂಪ್‌ ಆಹ್ವಾನಿತ ಕ್ರಿಕೆಟ್ ಟೂರ್ನಿಯಲ್ಲಿ ಫೈನಲ್‌ ಪ್ರವೇಶಿಸಿದೆ.

ನಾಲ್ಕು ಲೀಗ್‌ ಪಂದ್ಯಗಳಲ್ಲಿ ಮೂರರಲ್ಲಿ ಗೆಲುವು ಸಾಧಿಸಿರುವ ಹುಬ್ಬಳ್ಳಿ ಕ್ರಿಕೆಟ್ ಅಕಾಡೆಮಿ (ಎಚ್‌ಸಿಎ) ಈಗಾಗಲೇ ಪ್ರಶಸ್ತಿ ಸುತ್ತು ಪ್ರವೇಶಿಸಿದೆ. ಈ ತಂಡ ಸೋಮವಾರ ಬೆಳಿಗ್ಗೆ 8.30ಕ್ಕೆ ನಡೆಯುವ ಫೈನಲ್‌ನಲ್ಲಿ ಕೋಲ್ಟ್ಸ್‌ ವಿರುದ್ಧ ಪೈಪೋಟಿ ನಡೆಸಲಿದೆ. ಕೋಲ್ಟ್ಸ್‌ ಎಲ್ಲ ನಾಲ್ಕು ಪಂದ್ಯಗಳಲ್ಲಿ ಜಯ ಪಡೆದಿದೆ.

ರೈಲ್ವೆ ಮೈದಾನದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಶ್ರೀದುರ್ಗಾ ಸ್ಪೋರ್ಟ್ಸ್ ಅಕಾಡೆಮಿ 20 ಓವರ್‌ಗಳಲ್ಲಿ ಒಂದು ವಿಕೆಟ್‌ ನಷ್ಟಕ್ಕೆ 136 ರನ್ ಗಳಿಸಿತು. ಎದುರಾಳಿ ಕೋಲ್ಟ್ಸ್ ತಂಡ 17 ಓವರ್‌ಗಳಲ್ಲಿ ಐದು ವಿಕೆಟ್‌ ಕಳೆದುಕೊಂಡು ಗುರಿ ತಲುಪಿತು. ಈ ತಂಡದ ಆಯುಷ್‌ ಅಜೇಯ 70 ರನ್ ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ದಿನದ ಇನ್ನೊಂದು ಪಂದ್ಯದಲ್ಲಿ ಆರ್‌ಐಎಸ್‌ ತಂಡ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 120 ರನ್‌ ಗಳಿಸಿತ್ತು. ಈ ಗುರಿ ಎದುರು ಪರದಾಡಿದ ಚಾಂಪಿಯನ್‌ ನೆಟ್‌ ತಂಡ 15.2 ಓವರ್‌ಗಳಲ್ಲಿ 78 ರನ್‌ ಗಳಿಸಲಷ್ಟೇ ಶಕ್ತವಾಯಿತು. ಆರ್‌ಐಎಸ್‌ ತಂಡದ ರಿಧಿಮ್‌ ಐದು ವಿಕೆಟ್‌ ಕಬಳಿಸಿ ಗಮನ ಸೆಳೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT