ಭಾನುವಾರ, ಮೇ 29, 2022
22 °C

ಕ್ರಿಕೆಟ್‌: ಎಚ್‌ಸಿಎ ಶುಭಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಬೌಲಿಂಗ್‌ನಲ್ಲಿ ಚುರುಕುತನ ತೋರಿದ ಹುಬ್ಬಳ್ಳಿ ಕ್ರಿಕೆಟ್‌ ಅಕಾಡೆಮಿ (ಎಚ್‌ಸಿಎ) ತಂಡ, ಇಲ್ಲಿನ ಕರ್ನಾಟಕ ಜಿಮ್ಖಾನಾ ಮೈದಾನದಲ್ಲಿ ನಡೆಯುತ್ತಿರುವ ತ್ರಿಕೋನ ಕ್ರಿಕೆಟ್‌ ಸರಣಿಯ ಮಂಗಳವಾರದ ಪಂದ್ಯದಲ್ಲಿ 69 ರನ್‌ಗಳ ಗೆಲುವು ಸಾಧಿಸಿತು.

ಮೊದಲು ಬ್ಯಾಟ್‌ ಮಾಡಿದ ಎಚ್‌ಸಿಎ 39.5 ಓವರ್‌ಗಳಲ್ಲಿ 156 ರನ್‌ ಗಳಿಸಿ ಆಲೌಟ್‌ ಆಯಿತು. ಎದುರಾಳಿ ಫಸ್ಟ್‌ ಕ್ರಿಕೆಟ್‌ ಅಕಾಡೆಮಿ 26.3 ಓವರ್‌ಗಳಲ್ಲಿ 87 ರನ್‌ ಗಳಿಸಿ ತನ್ನ ಹೋರಾಟ ಮುಗಿಸಿತು. ಎಚ್‌ಸಿಎ ತಂಡದ ಅಮೆಯ್ ದೇಸಾಯಿ ಮತ್ತು ಅಭವ್ ದೇಸಾಯಿ ತಲಾ ಎರಡು ವಿಕೆಟ್‌ ಕಬಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಇನೋಷ್ ನಾಲ್ಕು ಓವರ್‌ ಬೌಲಿಂಗ್‌ ಮಾಡಿ ಕೇವಲ 7 ರನ್‌ ನೀಡಿ ಎರಡು ವಿಕೆಟ್ ಉರುಳಿಸಿ ಪಂದ್ಯ ಶ್ರೇಷ್ಠ ಗೌರವ ಪಡೆದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು