ಹುಬ್ಬಳ್ಳಿ: ಲೀಗ್ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದ ಹುಬ್ಬಳ್ಳಿ ಸ್ಪೋರ್ಟ್ಸ್ ಕ್ಲಬ್ ‘ಎ’ ತಂಡ ಮೊದಲ ಡಿವಿಷನ್ ಕ್ರಿಕೆಟ್ ಟೂರ್ನಿಯಲ್ಲಿ ಚಾಂಪಿಯನ್ ಆದರೆ, ಬಿಡಿಕೆ ಸ್ಪೋರ್ಟ್ಸ್ ಫೌಂಡೇಷನ್ ‘ಎ’ ರನ್ನರ್ಸ್ ಅಪ್ ಸ್ಥಾನ ಪಡೆದುಕೊಂಡಿತು.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಧಾರವಾಡ ವಲಯ ಆಯೋಜಿಸಿದ್ದ ಟೂರ್ನಿಯ ಪಂದ್ಯಗಳು ಹುಬ್ಬಳ್ಳಿ ಮತ್ತು ಬೆಳಗಾವಿಯಲ್ಲಿ ನಡೆದವು. ಪ್ರತಿ ತಂಡಗಳು ತಲಾ 11 ಪಂದ್ಯಗಳನ್ನು ಆಡಿದವು. ಬೆಳಗಾವಿಯ ಅಮೃತ ಪೋತದಾರ ಸಿಸಿಐ ಹಾಗೂ ಧಾರವಾಡದ ಎಸ್ಡಿಎಂ ಕ್ರಿಕೆಟ್ ಅಕಾಡೆಮಿ ‘ಎ’ ತಂಡಗಳು ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನ ಗಳಿಸಿದವು.

ಅಂಕಪಟ್ಟಿಯಲ್ಲಿ ಕೊನೆಯ ಎರಡು ಸ್ಥಾನ ಪಡೆದ ಧಾರವಾಡದ ಕ್ರಿಕೆಟ್ ಕ್ಲಬ್ ಆಫ್ ಕರ್ನಾಟಕ ‘ಎ’ ಮತ್ತು ಹುಬ್ಬಳ್ಳಿ ಸ್ಪೋರ್ಟ್ಸ್ ಕ್ಲಬ್ ‘ಬಿ’ ಎರಡನೇ ಡಿವಿಷನ್ಗೆ ಹಿಂಬಡ್ತಿ ಪಡೆದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.