ಸೋಮವಾರ, ಅಕ್ಟೋಬರ್ 26, 2020
21 °C

ಹುಬ್ಬಳ್ಳಿ: ಯುವಕರ ನಡುವೆ ಹೊಡೆದಾಟ, ಇಬ್ಬರ ಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ನಗರದ ಗೋಪನಕೊಪ್ಪ ಬಸ್ ನಿಲ್ದಾಣದ ಬಳಿ ಬುಧವಾರ ತಡರಾತ್ರಿ ಮಾರಕಾಸ್ತ್ರಗಳಿಂದ ಹೊಡೆದು ಇಬ್ಬರ ಕೊಲೆ ಮಾಡಲಾಗಿದೆ.

ಮಂಜುನಾಥ ಕಬ್ಬಿನ ಹಾಗೂ ನಿಯಾಜ್ ಕೊಲೆಯಾದ ಯುವಕರು.

ಹಳೆಯ‌ ವೈಷ್ಯಮದ ಹಿನ್ನೆಲೆಯಲ್ಲಿ ಹೊಡೆದಾಟ ನಡೆದಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವುದರಿಂದ ಇಬ್ಬರು ಮೃತಪಟ್ಟಿದ್ದಾರೆ.
 
ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಆರ್ ದಿಲೀಪ್ ಗುರುವಾರ ಬೆಳಿಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು