ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ: ವಿಮರ್ಶಕನಿಗೆ ಸಂದ ರಾಜ್ಯೋತ್ಸವ ಪ್ರಶಸ್ತಿ

Last Updated 28 ಅಕ್ಟೋಬರ್ 2020, 12:08 IST
ಅಕ್ಷರ ಗಾತ್ರ

ಧಾರವಾಡ: ವಿಮರ್ಶಕ, ಸಂಶೋಧ, ಕವಿ ಪ್ರೊ. ಸಿ.ಪಿ.ಸಿದ್ಧಾಶ್ರಮ ಅವರಿಗೆ ಸಾಹಿತ್ಯ ಕ್ಷೇತ್ರದಲ್ಲಿ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಕಲಘಟಗಿ ತಾಲ್ಲೂಕಿನ ಹುಲ್ಲಂಬಿ ಗ್ರಾಮದವರಾದ ಪ್ರೊ. ಸಿದ್ಧಾಶ್ರಮ ಅವರು ಮೈಸೂರು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದಾರೆ. ಸಂಸ್ಕೃತಿ ಚಿಂತನ, ಹಳಗನ್ನಡ ಸಾಹಿತ್ಯ, ಮಧ್ಯಕಾಲೀನ ಕನ್ನಡ ಸಾಹಿತ್ಯ, ಆಧುನಿಕ ಸಾಹಿತ್ಯ ಕಾವ್ಯ, ಛಂದಸ್ಸು ಕುರಿತು ಹಲವು ಕೃತಿಗಳನ್ನು ಇವರು ರಚಿಸಿದ್ದಾರೆ.ಆಧುನಿಕ ವಚನಕಾರರ ಕುರಿತು ಅವರ ‘ಸಿ.ಪಿ.ಸಿದ್ದಾಶ್ರಮ ಅವರ 101 ಆಧುನಿಕ ವಚನಗಳು’ ತಮಿಳು ಹಾಗೂ ಕನ್ನಡಕ್ಕೆ ಭಾಷಾಂತರಗೊಂಡಿದೆ.

ಇದರೊಂದಿಗೆ 24 ಗ್ರಂಥಗಳು, ಸಂಶೋಧನಾ ಕೃತಿಗಳು, ಕವನ ಸಂಕಲನ, ಮಕ್ಕಳ ಸಾಹಿತ್ಯದಲ್ಲೂ ಹಲವು ಕೃತಿಗಳನ್ನು ಇವರು ರಚಿಸಿದ್ದಾರೆ.ಕರ್ನಾಟಕ ಕಾಲೇಜಿನಲ್ಲಿ ಪದವಿ ಪೂರೈಸಿ ಹೆಚ್ಚಿನ ಶಿಕ್ಷಣಕ್ಕಾಗಿ ಮೈಸೂರಿಗೆ ತೆರಳಿದ ಪ್ರೊ. ಸಿದ್ಧಾಶ್ರಮ ಅವರು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾಗಿ, ಪ್ರಭಾರ ಕುಲಪತಿಯಾಗಿಯೂ ಕೆಲಸ ಮಾಡಿದ್ದಾರೆ. ಸದ್ಯ ಮೈಸೂರಿನಲ್ಲೇ ನೆಲೆಸಿದ್ದಾರೆ.

ಪ್ರಶಸ್ತಿ ಕುರಿತು ಪ್ರತಿಕ್ರಿಯಿಸಿದ ಅವರು, ‘ಪ್ರಶಸ್ತಿ ಬಂದಿರುವುದು ಸಹಜವಾಗಿಯೇ ಸಂತಸವಾಗಿದೆ. ಇದು ನನ್ನ 45 ವರ್ಷಗಳ ಸಾಹಿತ್ಯ ಕೃಷಿಗೆ ಸಂದ ಗೌರವವಾಗಿದೆ. ಇದನ್ನು ಸಂತೋಷದಿಂದ ಸ್ವೀಕರಿಸುತ್ತಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT