ಶನಿವಾರ, ಮಾರ್ಚ್ 6, 2021
31 °C

ಹುಬ್ಬಳ್ಳಿ: ಕೊಲೆ ಮಾಡಿ ಚರಂಡಿಗೆ ಎಸೆದ ದುಷ್ಕರ್ಮಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೃತ ದೇಹ–ಪ್ರಾತಿನಿಧಿಕ ಚಿತ್ರ

ಹುಬ್ಬಳ್ಳಿ: ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿ ಶವವನ್ನು ನಗರದ ದೇವಾಂಗಪೇಟೆಯ ಚರಂಡಿಯಲ್ಲಿ ಎಸೆದು ಹೋಗಿದ್ದಾರೆ.

ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಾಬುಸಾಬ ಅಲ್ಲಾಭಕ್ಷ ಶಿವಳ್ಳಿ ಕೊಲೆಯಾದವರು. ದೇವಾಂಗಪೇಟೆ ನಿವಾಸಿಯಾದ ಅವರು, ಮಂಗಳವಾರ ಮಧ್ಯಾಹ್ನ ಕೆಲಸ ಮುಗಿಸಿಕೊಂಡು ಮನೆಗೆ ಬಂದ ಅವರು, ರಾತ್ರಿ ಹೊರಗೆ ಹೋದವರು ಮನೆಗೆ ಬಂದಿರಲಿಲ್ಲ.

ಬೆಳಿಗ್ಗೆ 7ರ ಹೊತ್ತಿಗೆ  ಚರಂಡಿಯಲ್ಲಿ ರಕ್ತಸಿಕ್ತ ಮೃತದೇಹವನ್ನು ಕಂಡ ಸ್ಥಳೀಯರು ಠಾಣೆಗೆ ವಿಷಯ ತಿಳಿಸಿದರು. ಸ್ಥಳಕ್ಕೆ ತೆರಳಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಯಿತು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ  ಪರಿಚಿತರೇ ಕೊಲೆ ಮಾಡಿರುವ ಮಾಹಿತಿ ಸಿಕ್ಕಿದ್ದು, ಶೀಘ್ರ ಆರೋಪಗಳನ್ನು ಬಂಧಿಸಲಾಗುವುದು ಎಂದು ಅಶೋಕನಗರ ಠಾಣೆ ಪೊಲೀಸರು ತಿಳಿಸಿದರು.

ಸ್ಥಳಕ್ಕೆ  ಡಿಸಿಪಿ ರಾಮರಾಜನ್ ಭೇಟಿ  ನೀಡಿ ಪರಿಶೀಲಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು