ಹುಬ್ಬಳ್ಳಿ: ಕ್ರಿಪ್ಟೊ ಕರೆನ್ಸಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು ಎಂದು ನಂಬಿಸಿ ಇಲ್ಲಿನ ಕೇಶ್ವಾಪುರದ ನಿವಾಸಿ, ಬ್ಯಾಂಕ್ ಉದ್ಯೋಗಿ ಪಾರುಶ್ ಗೌರ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ₹39.42 ಲಕ್ಷ ವಂಚಿಸಿದ್ಧಾನೆ.

‘ಪಾರುಶ್ ಅವರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ, ಆಪ್ಷನ್ ಟ್ರೇಡಿಂಗ್ ಮತ್ತು ಕ್ರಿಪ್ಟೊ ಕರೆನ್ಸಿಯಲ್ಲಿ ಹಣ ಹೂಡಿಕೆ ಮಾಡಿದರೆ ಲಾಭ ಗಳಿಸಬಹುದು ಎಂದು ಹೇಳಿದ್ದಾನೆ. ನಂತರ ಟೆಲಿಗ್ರಾಂ ಆ್ಯಪ್ ಮೂಲಕ ಸಂಪರ್ಕಿಸಿ, ಲಾಭದ ಆಮಿಷವೊಡ್ಡಿ ವಿವಿಧ ಬ್ಯಾಂಕ್ ಖಾತೆಗಳಿಂದ ₹39,42 ಲಕ್ಷ ವರ್ಗಾಯಿಸಿಕೊಂಡು ಲಾಭಾಂಶ ನೀಡದೆ, ಹೂಡಿಕೆ ಮಾಡಿದ ಹಣ ಮರಳಿಸದೆ ವಂಚಿಸಿದ್ದಾನೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರುಗಳ ರಕ್ಷಣೆ; ನಾಲ್ವರ ಬಂಧನ:

ತಾಲ್ಲೂಕಿನ ಕುಸುಗಲ್ ಗ್ರಾಮದಿಂದ ಬ್ಯಾಹಟ್ಟಿ ಮಾರ್ಗವಾಗಿ ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಆರು ಕರುಗಳನ್ನು ಗ್ರಾಮೀಣ ಠಾಣೆ ಪೊಲೀಸರು ರಕ್ಷಣೆ ಮಾಡಿ, ನಾಲ್ವರನ್ನು ಬಂಧಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಮಲ್ಲಾಪುರದ ನಿವಾಸಿ ತಸ್ಲೀಮ್ ಮುಲ್ಲಾ, ನದೀಮ್ ಬೇಪಾರಿ, ಖಾಜೇಸಾಬ ಬೇಪಾರಿ, ಶಾರುಖ್ ಬೇಪಾರಿ ಬಂಧಿತರು.

₹ಆರೋಪಿಗಳು 1.47 ಲಕ್ಷದ ಮೌಲ್ಯದ ಜರ್ಸಿ, ಗಿರ್, ಜವಾರಿ, ಎಚ್ಎಫ್ ತಳಿಯ ಕರುಗಳನ್ನು ಮೇವು ಮತ್ತು ನೀರಿನ ವ್ಯವಸ್ಥೆ ಇಲ್ಲದೆ, ಹಿಂಸೆ ಆಗುವಂತಹ ರೀತಿಯಲ್ಲಿ ವಾಹನದಲ್ಲಿ ತುಂಬಿಕೊಂಡು ಕಸಾಯಿಖಾನೆಗೆ ಸಾಗಿಸುತ್ತಿದ್ದಾಗ ದಾಳಿ ನಡೆಸಲಾಯಿತು’ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.