ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಸಿಡಿ: ಜನವರಿ 3ರಿಂದ ಸಾರ್ಥವಾಹ ಸಾಂಸ್ಕೃತಿಕ ಉತ್ಸವ

Published 1 ಜನವರಿ 2024, 15:47 IST
Last Updated 1 ಜನವರಿ 2024, 15:47 IST
ಅಕ್ಷರ ಗಾತ್ರ

ಧಾರವಾಡ: ನಗರದ ಕರ್ನಾಟಕ ಕಲಾ ಮಹಾವಿದ್ಯಾಲಯದ(ಕೆಸಿಡಿ) ಪ್ರವಾಸೋದ್ಯಮ ಅಧ್ಯಯನ ವಿಭಾಗ ಹಾಗೂ ಬೆಂಗಳೂರಿನ ಪ್ರವಾಸೋದ್ಯಮ ಸಚಿವಾಲಯದ ವತಿಯಿಂದ ಜನವರಿ 3ರಿಂದ 5ರ ವರೆಗೆ ನಗರದಲ್ಲಿ ‘ಸಾರ್ಥವಾಹ- 2024’ ಸಾಂಸ್ಕೃತಿಕ ಉತ್ಸವ ನಡೆಯಲಿದೆ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವ ಎ.ಚನ್ನಪ್ಪ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೃಜನಾ ರಂಗಮಂದಿರದಲ್ಲಿ ಸಂಜೆ 5ಕ್ಕೆ ಉತ್ಸವ ಆರಂಭವಾಗಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಉದ್ಘಾಟನೆ ನೆರೆವೇರಿಸುವರು. ಶಾಸಕ ಅರವಿಂದ ಬೆಲ್ಲದ, ಚಲನಚಿತ್ರ ನಿರ್ದೇಶಕ ಯೋಗರಾಜ್ ಭಟ್, ನಟ ನಿರ್ದೇಶಕ ಯಶವಂತ ಸರದೇಶಪಾಂಡೆ ಪಾಲ್ಗೊಳುವರು. ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಕೆ.ಬಿ.ಗುಡಸಿ ಅಧ್ಯಕ್ಷತೆ ವಹಿಸುವರು ಎಂದರು.

5ರಂದು ಸಮಾರೋಪ ಸಮಾರಂಭ ನಡೆಯಲಿದೆ. ಗಾಯಕಿ ಅನುರಾಧ ಭಟ್, ಹುಬ್ಬಳ್ಳಿ– ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ, ಕರ್ನಾಟಕ ವಿಶ್ವವಿದ್ಯಾಲಯದ  ಪರೀಕ್ಷಾಂಗ ಕುಲಸಚಿವ ಪ್ರೊ.ಎನ್.ವೈ.ಮಟ್ಟಿಹಾಳ ಪಾಲ್ಗೊಳ್ಳುವರು ಎಂದರು.

ಭಾಷಣ ಸ್ಪರ್ಧೆ, ಜಲವರ್ಣ ಚಿತ್ರಕಲೆ, ಕೋಲಾಜ್, ಆಹಾರ ಪ್ರಾತ್ಯಕ್ಷಿಕೆ ಪ್ರದರ್ಶನ ಸ್ಪರ್ಧೆ, ಭಾರತೀಯ ಜಾನಪದ ನೃತ್ಯ, ರಸಪ್ರಶ್ನೆ ಸ್ಪರ್ಧೆ, ಇ-ಪೋಸ್ಟರ್ ಮೇಕಿಂಗ್, ಸ್ಕಿಟ್, ಅಡುಗೆ ಸ್ಪರ್ಧೆ, ಚುಕ್ಕಿ ರಂಗೋಲಿ ಸ್ಪರ್ಧೆಗಳು ಮೂರು ದಿನದ ಉತ್ಸವದಲ್ಲಿ ನಡೆಯಲಿವೆ. ಹುಬ್ಬಳ್ಳಿ- ಧಾರವಾಡದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸುವರು. ವಿದ್ಯಾರ್ಥಿಗಳ ಪ್ರತಿಭೆಯ ಶೋಧ ಈ ಕಾರ್ಯಕ್ರಮದ ಉದ್ದೇಶ ಎಂದರು.

ಸಂಯೋಜಕ ಜಗದೀಶ್.ಕೆ, ಮಂಜುಳಾ ಚಲವಾದಿ, ಐ.ಸಿ.ಮುಳಗುಂದ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT