ಬುಧವಾರ, ಜುಲೈ 28, 2021
21 °C

ಸಿಲಿಂಡರ್ ಸ್ಫೋಟ: ನಾಲ್ವರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ನಗರದ ಹೂಗಾರ ಓಣಿಯ ಮನೆಯೊಂದರಲ್ಲಿ ಶನಿವಾರ ಬೆಳಿಗ್ಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು, ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಅಮಿತ ಕುಮಸಿ, ಅವರ ಪತ್ನಿ ಮಂಜುಳಾ, ಮಕ್ಕಳಾದ ಸಾಯಿರಾಮ್ ಹಾಗೂ ಪ್ರೀತಂಗೆ ಸುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಬಂದ ಅಗ್ನಿಶಾಮಕ ಅಧಿಕಾರಿ ಚಂದ್ರಶೇಖರ್ ಭಂಡಾರಿ ನೇತೃತ್ವದ ತಂಡ ಬೆಂಕಿ ನಂದಿಸಿದೆ. ಘಟನೆಯಲ್ಲಿ ಮನೆ ಜಖಂಗೊಂಡಿದೆ.

ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅಮಿತ ಅವರು, ನಮ್ಮ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮನೆಯವರು ರಾತ್ರಿ ಸಿಲಿಂಡರ್ ಆಫ್ ಮಾಡುವುದನ್ನು ಮರೆತಿರುವುದರಿಂದ, ರಾತ್ರಿಯಿಡೀ ಅನಿಲ ಸೋರಿಕೆಯಾಗಿದೆ. ಬೆಳಿಗ್ಗೆ 8ರ ಹೊತ್ತಿಗೆ ಅಮಿತ ಅವರ ಪತ್ನಿ ಟೀ ಮಾಡಲು ಲೈಟರ್ ಹೊತ್ತಿಸಿದಾಗ ಸಿಲಿಂಡರ್ ಸ್ಫೋಟಗೊಂಡಿದೆ. ಗಾಯಗೊಂಡ ನಾಲ್ವರನ್ನು ಅಕ್ಕಪಕ್ಕದವರು ಆಂಬುಲೆನ್ಸ್‌ನಲ್ಲಿ ಕಿಮ್ಸ್ ಗೆ ಸಾಗಿಸಿದರು ಎಂದು ಮನೆ ಮಾಲೀಕ ಫಕ್ಕೀರಪ್ಪ ಶೆಟ್ಟರ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು