ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೃಹಸಚಿವರಿಗೆ ನಿಂದನೆ: ಹುಬ್ಬಳ್ಳಿಯಲ್ಲಿ ಪ್ರತಿಭಟನೆ

Published 23 ಏಪ್ರಿಲ್ 2024, 10:11 IST
Last Updated 23 ಏಪ್ರಿಲ್ 2024, 10:11 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರನ್ನು ಅವಾಚ್ಯವಾಗಿ ನಿಂದಿಸಿದ ಬೀದರ ನಗರಸಭಾ ಸದಸ್ಯ ವಿರೂಪಾಕ್ಷ ಗದಗಿ ಅವರನ್ನು ಕೂಡಲೇ ಎಸ್ಸಿ, ಎಸ್ಟಿ ದೌರ್ಜನ್ಯ ಕಾಯ್ದೆ ಅಡಿ ಬಂಧಿಸಬೇಕು ಎಂದು ಒತ್ತಾಯಿಸಿ ವಿವಿಧ ದಲಿತ ಸಂಘಟನೆಗಳ ಮಹಾಮಂಡಳದ ಸದಸ್ಯರು ಮಂಗಳವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದವು.

ಶಾಸಕ ಪ್ರಸಾದ ಅಬ್ಬಯ್ಯ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತದಿಂದ ಉಪನಗರ ಪೊಲೀಸ್ ಠಾಣೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಗೃಹಸಚಿವರನ್ನು ನಿಂದಿಸಿದ ನಗರಸಭೆ ಸದಸ್ಯರನ್ನು ಬಂಧಿಸಿ, ಕೂಡಲೇ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

'ನಗರದ ಬಿವಿಬಿ ಕಾಲೇಜಿನಲ್ಲಿ ಕೊಲೆಯಾದ ನೇಹಾ ಪ್ರಕರಣ ಖಂಡಿಸಿ ನಡೆದ ಪ್ರತಿಭಟನೆ ವೇಳೆ ವಿರೂಪಾಕ್ಷ ಅವರು ಮಾತನಾಡುವಾಗ, ಗೃಹಸಚಿವರ ಕುಟುಂಬದ ಬಗ್ಗೆ ಮಾತನಾಡಿದ್ದಾರೆ. ಅವಹೇಳನಕಾರಿಯಾಗಿ ನಿಂದಿಸಿ ತೇಜೋವಧೆ ಮಾಡಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಗುರುನಾಥ ಉಳ್ಳಿಕಾಶಿ, ಸಂತೋಷ ಚಲವಾದಿ, ಮಹೇಶ ಹಂಜಗಿ, ಶಾಮ್ ಜಾಧವ, ಚೇತನ ಹಿರೇಕೆರೂರ, ಶ್ರೀನಿವಾಸ ಬೆಳವಡಿ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT