ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಹಪೀಡಿತ ಸ್ಥಳಗಳಿಗೆ ಜಿಲ್ಲಾಧಿಕಾರಿ ಭೇಟಿ

Last Updated 11 ಆಗಸ್ಟ್ 2019, 13:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಬೆಣ್ಣಿಹಳ್ಳ ಪ್ರವಾಹ ಸಂಭವಿಸಿದ ಶಿರಗುಪ್ಪಿ ಹಾಗೂ ಇಂಗಳಹಳ್ಳಿಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.

ಸಂತ್ರಸ್ತರಿಗಾಗಿ ಈ ಗ್ರಾಮಗಳಲ್ಲಿ ಸ್ಥಾಪಿಸಿರುವ ಪುನರ್ವಸತಿ ಕೇಂದ್ರಗಳಿಗೆ ಭೇಟಿ ನೀಡಿದ ಅವರು, ಸಂತ್ರಸರಿಗೆ ಸರಿಯಾದ ಆಹಾರ ಹಾಗೂ ವೈದ್ಯಕೀಯ ಸೌಲಭ್ಯ ದೊರುಕುತ್ತಿದೆಯೇ ಎಂದು ವಿಚಾರಿಸಿದರು. ಪ್ರವಾಹದಿಂದಾಗಿ ಕುಸಿದ ಮನೆಗಳನ್ನು ವೀಕ್ಷಿಸಿ, ನಷ್ಟದ ವಿವರವನ್ನು ಪ್ರಮಾಣಿಸಿ ಸಂತ್ರಸ್ತರಿಗೆ ಶೀಘ್ರ ಪರಿಹಾರ ಧನ ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೀಮೆಎಣ್ಣೆಗೆ ಮನವಿ:ಪ್ರವಾಹದಿಂದಾಗಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ಬಿಗಡಾಯಿಸಿದೆ. ವಾರದಿಂದ ವಿದ್ಯುತ್ ಇಲ್ಲದೆ ಕತ್ತಲೆಯಲ್ಲೇ ಕಳೆಯಬೇಕಾದ ಅನಿವಾರ್ಯತೆ ಎದುರಾಗಿದೆ. ಹಾಗಾಗಿ, ಸೀಮೆಎಣ್ಣೆ ವಿತರಿಸಲು ಕ್ರಮ ಕೈಗೊಳ್ಳಬೇಕು’ ಎಂದು ಇಂಗಳಹಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

ಬೇಡಿಕೆಗೆ ಸ್ಪಂದಿಸಿದ ಜಿಲ್ಲಾಧಿಕಾರಿ, ತ್ವರಿತವಾಗಿ ವಿದ್ಯುತ್ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸುವ ಜತೆಗೆ, ಆಹಾರ ಇಲಾಖೆಯಿಂದ ಅಗತ್ಯ ಪಡಿತರ ಮತ್ತು ಸೀಮೆಎಣ್ಣೆ ವಿತರಿಸಲ ಕ್ರಮ ಕೈಗೊಳ್ಳುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು.

ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ್ ಸಂಗಪ್ಪ ಬಾಡಗಿ ಹಾಗೂ ಹೆಚ್ಚುವರಿ ತಹಶೀಲ್ದಾರ್ ಪ್ರಕಾಶ್ ನಾಸಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT