ಭಾನುವಾರ, ಆಗಸ್ಟ್ 14, 2022
19 °C

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಾಚೇದಮಠ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: 2020ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ಹಿರಿಯ ಚಿತ್ರ ಕಲಾವಿದ ಮುರುಗಯ್ಯ ಗುರುಪಾದಯ್ಯ ವಾಚೇದಮಠ (87) ಸೋಮವಾರ ನಿಧನರಾದರು. ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಇಲ್ಲಿನ ಮಂಜುನಾಥ ನಗರದಲ್ಲಿ ವಾಸವಾಗಿದ್ದರು. 

ಮೂಲತ: ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ತೋಗನೂರ ಗ್ರಾಮದ ವಾಚೇದಮಠ ಅವರು 1958ರಲ್ಲಿ ಚಿತ್ರಕಲಾ ಶಿಕ್ಷಕರ ಪರೀಕ್ಷೆಯಲ್ಲಿ ಮುಂಬೈ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದರು. ಸವದತ್ತಿಯಲ್ಲಿ ಬಸವರೂಪ ಪ್ರದರ್ಶನ, ಗಾಂಧಿ ದರ್ಶನ, ಹುಬ್ಬಳ್ಳಿಯಲ್ಲಿ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನಗಳನ್ನು ಏರ್ಪಡಿಸಿದ್ದರು. ಸಾವಿರಾರು ರೇಖಾಚಿತ್ರಗಳನ್ನು, ಸಂಯೋಜನೆಗಳನ್ನು ಮತ್ತು ಭಾವಚಿತ್ರಗಳನ್ನು ರಚಿಸಿದ್ದಾರೆ.

ಇವರಿಗೆ 1998–99ನೇ ಸಾಲಿನ ಕರ್ನಾಟಕ ಲಲಿತ ಕಲಾ ಅಕಾಡೆಮಿ ಪ್ರಶಸ್ತಿ ಲಭಿಸಿತ್ತು. 1956ರಿಂದ ಶಿರಹಟ್ಟಿಯ ಎಂ.ಎಂ. ಡಬಾಲಿ ಪ್ರೌಢಶಾಲೆಯಲ್ಲಿ ಕಲಾಶಿಕ್ಷಕ ವೃತ್ತಿ ಆರಂಭಿಸಿದರು. ಕೆಎಲ್‌ಇ ಶಿಕ್ಷಣ ಸಂಸ್ಥೆಯಲ್ಲಿ ನಾಲ್ಕು ದಶಕಗಳ ಕಾಲ ಶಿಕ್ಷಕರಾಗಿ ಕೆಲಸ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.