ಶುಕ್ರವಾರ, ಜನವರಿ 17, 2020
24 °C

ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಬಗ್ಗೆ ಅನುಮಾನ ಬೇಡ: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಹುಬ್ಬಳ್ಳಿ: ‘ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂಪ್ಪ ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯ ಬಗ್ಗೆ ಯಾವುದೇ ಅನುಮಾನಗಳು ಬೇಡ’ ಎಂದರು.

‘ಸ್ಪಷ್ಟ ಬಹುಮತ ಇರುವುದರಿಂದ  ಮೂರು  ವರ್ಷ ನಮ್ಮದೇ ಸರ್ಕಾರ ಇರಲಿದೆ’ ಎಂದು ಹೇಳಿದರು

‘ಇದೇ ತಿಂಗಳ ಅಂತ್ಯದಲ್ಲಿ ದೆಹಲಿಗೆ ಹೋಗಿ ಸಚಿವ ಸಂಪುಟ‌ ವಿಸ್ತರಣೆ ಬಗ್ಗೆ ಚರ್ಚೆ ಮಾಡುತ್ತೇನೆ. ನಮಗೆ ಬೆಂಬಲ ನೀಡಿದವರ ಭರವಸೆ ಈಡೇರಿಸುತ್ತೇವೆ’ ಎಂದರು.

‘ಮಹದಾಯಿ ವಿಚಾರವಾಗಿ‌ ನಾನು ಮತ್ತೊಮ್ಮೆ ಕೇಂದ್ರ ಜೊತೆ ಚರ್ಚೆ ಮಾಡುತ್ತೇನೆ‌’ ಎಂದು ಹೇಳಿದರು

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು