ಬುಧವಾರ, ಅಕ್ಟೋಬರ್ 20, 2021
24 °C

ಮೋದಿ ಸಾಧನೆ ಜನರಿಗೆ ತಲುಪಿಸಿ: ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಗಳನ್ನು ಜನರಿಗೆ ತಲುಪಿಸಬೇಕು. ಪಕ್ಷದ ಚೌಕಟ್ಟಿನಲ್ಲಿ  ವಹಿಸಿದ ಕೆಲಸವನ್ನು ಎಲ್ಲರೂ ಮಾಡಬೇಕು ಎಂದು ಬಿಜೆಪಿ ರಾಜ್ಯ ಘಟಕದ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಹೇಳಿದರು.

ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿಯು ನಗರದ ಹೆಬಸೂರ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು ’ದೇಶ ಕಟ್ಟುವ ಜವಾಬ್ದಾರಿ ಎಲ್ಲರ ಮೇಲಿದೆ. ಮೋದಿ ಅವರ ಸಾಧನೆಯಿಂದಾಗಿ ಜಗತ್ತು ಭಾರತದತ್ತ ನೋಡುತ್ತಿದೆ. ಅವರ ಜನಪ್ರಿಯತೆಯನ್ನು ಎದುರಾಳಿಗಳಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ರೈತ ಹೋರಾಟದ ಹಿಂದೆ ಕಾಂಗ್ರೆಸ್‌ ಕುಮ್ಮಕ್ಕು ಇದೆ’ ಎಂದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಅರವಿಂದ ಬೆಲ್ಲದ, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಮುಖಂಡರಾದ ತಿಪ್ಪಣ್ಣ ಮಜ್ಜಗಿ, ವಿಜಯಾನಂದ ಶೆಟ್ಟಿ, ಪ್ರಭು ನವಲಗುಂದಮಠ, ಜಯಾ ರುದ್ರೇಶ, ಸಂತೋಷ ಚವ್ಹಾಣ,  ನಾರಾಯಣ ಜರತಾರಘರ, ದತ್ತಮೂರ್ತಿ ಕುಲಕರ್ಣಿ, ರಾಜಕುಮಾರ ಬಸವ, ರವಿ ನಾಯ್ಕ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.