ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರು ಪೂರೈಕೆಗೆ ಆಗ್ರಹ: ಎಎಪಿ ಪ್ರತಿಭಟನೆ

Last Updated 28 ಡಿಸೆಂಬರ್ 2022, 12:35 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಅವಳಿ ನಗರದಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ, ನಗರದ ಪಾಲಿಕೆಯ ಕೇಂದ್ರ ಕಚೇರಿ ಬಳಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ನಾಲ್ಕೈದು ತಿಂಗಳಿಂದ ನಗರದಲ್ಲಿ ಕುಡಿಯುವ ನೀರಿನ ತೊಂದರೆ ವಿಪರೀತವಾಗಿದೆ. ಜನ ನೀರಿಲ್ಲದೆ ಪರದಾಡುವ ಸ್ಥಿತಿ ಬಂದಿದೆ. ನೀರು ಪೂರೈಕೆ ಹೊಣೆಯನ್ನು ಖಾಸಗಿ ಎಲ್‌ ಆ್ಯಂಡ್ ಟಿ ಕಂಪನಿಗೆ ವಹಿಸಿದಾಗಿನಿಂದ ಈ ಸಮಸ್ಯೆ ತಲೆದೋರಿದೆ ಎಂದರು.

ನೀರಿನ ಹಾಹಾಕಾರದಿಂದ ಜನ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಇಷ್ಟಾದರೂ ನೀರು ಪೂರೈಕೆಯಲ್ಲಿ ಯಾವುದೇ ಸುಧಾರಣೆಯಾಗಿಲ್ಲ. ಜನ ತಾಳ್ಮೆ ಕಳೆದುಕೊಳ್ಳುವುದಕ್ಕೆ ಮುಂಚೆ, ಪಾಲಿಕೆಯು ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಅನಂತಕುಮಾರ ಬುಗಡಿ, ಪ್ರಧಾನ ಕಾರ್ಯದರ್ಶಿ ವಿಕಾಸ ಸೊಪ್ಪಿನ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT