ಧಾರವಾಡ: ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯು ಡಿ.10 ರಂದು ನಗರದಲ್ಲಿ ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗೆ ಜನಾಂದೋಲನ ಮಹಾಮೈತ್ರಿ, ರಾಜ್ಯ ರೈತ ಸೇನೆ, ಕಲಬುರಗಿ ವಿಶ್ವವಿದ್ಯಾಲಯ ಬಿ.ಇಡಿ ವಿದ್ಯಾರ್ಥಿಗಳ ಹೋರಾಟ ಸಮಿತಿ ಹಾಗೂ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಜೇಷನ್(ಎಐಡಿವೈಒ) ಸಂಘಟನೆಗಳು ಬೆಂಬಲ ನೀಡಲಿವೆ’ ಎಂದು ಜನಾಂದೋಲನ ಮಹಾಮೈತ್ರಿ ರಾಜ್ಯ ಸಂಚಾಲಕ ಉಗ್ರ ನರಸಿಂಹೇಗೌಡ ತಿಳಿಸಿದರು.

‘ನ್ಯಾಯಯುತ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಿದ್ಯಾರ್ಥಿಗಳು ಹೋರಾಟಕ್ಕೆ ಕರೆ ನೀಡಿದ್ದಾರೆ. ರಾಜ್ಯ ಸರ್ಕಾರವು ಪೊಲೀಸರ ಮೂಲಕ ಹೋರಾಟ ಹತ್ತಿಕ್ಕುವ ಕಾರ್ಯ ಮಾಡುತ್ತಿರುವುದು ಖಂಡನೀಯ. ಹೋರಾಟಗಾರರ ಹಕ್ಕು ಕಸಿಯುವ ಕೆಲಸವನ್ನು ಪೊಲೀಸರು ಮಾಡಬಾರದು’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

‘ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಹಳಷ್ಟು ಹುದ್ದೆಗಳು ಖಾಲಿ ಇದ್ದರೂ ಐದಾರು ವರ್ಷಗಳಿಂದ ನೇಮಕಾತಿ ಮಾಡಿಲ್ಲ.ಇದನ್ನು ತೀವ್ರವಾಗಿ ಖಂಡಿಸುತ್ತೇವೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು ಸರ್ಕಾರದ ಕರ್ತವ್ಯ ಮತ್ತು ಉದ್ಯೋಗ ಕೊಡಿ ಎಂದು ಕೇಳುವುದು ಯುವಜನರ ಹಕ್ಕು. ಉದ್ಯೋಗ ಕೇಳಿದರೆ ಲಾಟಿ ಬೀಸುವುದು ಯಾವ ನ್ಯಾಯ’ ಎಂದು ಪ್ರಶ್ನಿಸಿದರು.

ರೈತ ಮುಖಂಡ ಶಂಕರ ಅಂಬಲಿ ಮಾತನಾಡಿ, ‘ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಹೋರಾಟಗಾರರನ್ನು ಬೆದರಿಸುವ ತಂತ್ರ ನಡೆಯುತ್ತಿದೆ. ವಿದ್ಯಾರ್ಥಿಗಳ ಜತೆ ಹೋರಾಟಕ್ಕೆ ನಾವು ಸಿದ್ಧವಾಗಿದ್ದೇವೆ’ ಎಂದರು. ಶರಣಪ್ಪ ಉದ್ಬಾಳ, ಜಗನಾಥ ಎಸ್.ಎಚ್ ಇದ್ದರು.

ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಗೆ ಬೆಂಬಲ

ಧಾರವಾಡ: ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಡಿ.10ರಂದು ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗೆ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ಸಹಿತ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದು ಎಐಕೆಕೆಎಂಎಸ್ ಕಾರ್ಯದರ್ಶಿ ಶರಣು ಗೋನವಾರ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರವನ್ನು ಆಗ್ರಹಿಸುವುದು ಉದ್ಯೋಗಾಕಾಂಕ್ಷಿಗಳ ಹಕ್ಕು. ಪ್ರತಿಭಟನೆಯಲ್ಲಿ ನಾವು ಭಾಗವಹಿಸುತ್ತೇವೆ’ ಎಂದರು.

ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷೆ ದೀಪಾ ಧಾರವಾಡ ಮಾತನಾಡಿ, ‘ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ನಮ್ಮ ಹಕ್ಕು. ಪೊಲೀಸರು ಹೋರಾಟವನ್ನು ಹತ್ತಿಕ್ಕುವುದು ಸರಿಯಲ್ಲ’ ಎಂದರು.

ಮುಖಂಡ ಚಂದ್ರಕಾಂತ್ ಹಿರೇಮಠ ಇದ್ದರು.