ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಡಿಸಿಪಿ ಅಮಾನತು ಆದೇಶ ಹಿಂಪಡೆಯಲು ಆಗ್ರಹ

Published 21 ಮೇ 2024, 15:41 IST
Last Updated 21 ಮೇ 2024, 15:41 IST
ಅಕ್ಷರ ಗಾತ್ರ

ನವಲಗುಂದ: ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ನ ಡಿಸಿಪಿಯಾಗಿದ್ದ ರಾಜೀವ್‌ ಎಂ., ಅವರ ಅಮಾನತು ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿ ವಿವಿಧ ದಲಿತ ಸಂಘಟನೆಗಳ ಹೋರಾಟ ಒಕ್ಕೂಟದಿಂದ ಮಂಗಳವಾರ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ ಐ.ಆರ್.ಭಜಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು. 

ಈ ವೇಳೆ ಒಕ್ಕೂಟದ ನಿಂಗಪ್ಪ ಕೆಳಗೇರಿ ಮಾತನಾಡಿ, ‘ಪೊಲೀಸ್‌ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ದಲಿತ ಸಮುದಾಯದ ಅಧಿಕಾರಿಗಳಿಗೆ ಅನ್ಯಾಯ ಮಾಡಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ರಾಜೀವ್‌ ಅವರ ಅಮಾನತು ಆದೇಶ ಹಿಂಪಡೆಯಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ದಲಿತ ಸಂಘಟನೆಗಳಿಂದ ಉಗ್ರ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಸಿದರು.

ಅಳಗವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವು ಕುಂಬಾರ ಮಾತನಾಡಿ, ‘ಕೊಲೆಯಾದ ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಎರಡೂ ಕುಟುಂಬಗಳಿಗೆ ಸರ್ಕಾರಿ ನೌಕರಿ ಮತ್ತು ಪರಿಹಾರ ನೀಡಬೇಕು’ ಎಂದು ಮನವಿ ಮಾಡಿದರು.

ಶಿವು ಪೂಜಾರ , ಕೃಷ್ಣಾ ಮಾದರ, ರವಿ ಹುಣಸಿಮರದ, ಯಕ್ಕೆರಪ್ಪ ನಾಗಣ್ಣವರ, ಸಂತೋಷ ಮಾದರ, ದಿಲೀಪ್ ರತ್ನಾಕರ, ಶರಣಪ್ಪ ಮಾದರ, ತಿಪ್ಪಣ್ಣ ಹುಚ್ಚನವರ, ನಾಗಪ್ಪ ಮಾದರ, ಮೌನೇಶ ಹುಣಶಿಮರದ ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT