ಕಚೇರಿ ಸ್ಥಳಾಂತರಿಸಲು ಆಗ್ರಹ

7

ಕಚೇರಿ ಸ್ಥಳಾಂತರಿಸಲು ಆಗ್ರಹ

Published:
Updated:

ಹುಬ್ಬಳ್ಳಿ: ಉತ್ತರ ಕರ್ನಾಟಕಕ್ಕೆ ಕೆಲವು ಕಚೇರಿಗಳನ್ನು ಸ್ಥಳಾಂತರ ಮಾಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಈ ಕುರಿತು ತ್ವರಿತ ಕ್ರಮ ಕೈಗೊಳ್ಳುತ್ತಿಲ್ಲ, ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದ್ದಾರೆ ಎಂದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಸೋಮಶೇಖರ ಕೋತಂಬರಿ ದೂರಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಬೇಕು ಎಂದು ಒತ್ತಾಯಿಸಿ ಬಂದ್‌ಗೆ ಕರೆ ನೀಡಿದ್ದೆವು. ಮುಖ್ಯಮಂತ್ರಿಗಳು ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದರಿಂದ ಬಂದ್‌ ವಾಪಸ್‌ ಪಡೆದಿದ್ದವು, ಅವರು ನೀಡಿದ್ದ 15 ದಿನಗಳ ಸಮಯವಕಾಶ ಮುಗಿದಿದೆ. ಈಗಲೂ ಕ್ರಮ ತೆಗೆದುಕೊಳ್ಳದೇ ಹೋದರೆ ಹಾವೇರಿಯಿಂದ ಬೆಳಗಾವಿ ತನಕ ಪಾದಯಾತ್ರೆ ಮಾಡಲಾಗುವುದು’ ಎಂದರು.

‘ಶೇ 50ರಷ್ಟು ಸರ್ಕಾರದ ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರ ಮಾಡಬೇಕು, ಬೆಳಗಾವಿಯನ್ನು ಎರಡನೇ ರಾಜಧಾನಿಯನ್ನಾಗಿ ಘೋಷಿಸಬೇಕು. ಬೆಳಗಾವಿಯಲ್ಲಿದ್ದ ಕೆ ಶಿಪ್‌ ಕಚೇರಿಯನ್ನು ಹಾಸನಕ್ಕೆ ಸ್ಥಳಾಂತರಿಸಲು ಹೆಚ್ಚು ಸಮಯ ಬೇಕಾಗಲಿಲ್ಲ, ಆದರೆ ಬೆಂಗಳೂರಿನಲ್ಲಿರುವ ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರಿಸಲು ಇಷ್ಟೊಂದು ಸಮಯ ಬೇಕೇ’ ಎಂದು ಸೋಮಶೇಖರ ಪ್ರಶ್ನಿಸಿದರು. 

ರಾಜ್ಯ ಸರ್ಕಾರ ಹಾವೇರಿ ಜಿಲ್ಲೆಯ ರೈತರಿಗೆ ಬೆಳೆವಿಮೆ ಮತ್ತು ಬೆಳೆ ಹಾನಿಯ ಪರಿಹಾರ ನೀಡಿಲ್ಲ, ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕೋತಂಬರಿ ಹೇಳಿದಾಗ ‘ನಿಮಗೆ ಹಾವೇರಿ ಜಿಲ್ಲೆಯಷ್ಟೇ ಉತ್ತರ ಕರ್ನಾಟಕವೇ, ಈ ಭಾಗದ 13 ಜಿಲ್ಲೆಗಳಿಗೆ ಬರಬೇಕಾದ ಬೆಳೆಹಾನಿ ಪರಿಹಾರದ ಮೊತ್ತವೆಷ್ಟು’ ಎಂದು ಪ್ರಶ್ನಿಸಿದಾಗ ಉತ್ತರಿಸಲು ಅವರು ತಡಬಡಾಯಿಸಿದರು.

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !