ಹುಬ್ಬಳ್ಳಿ: ಕುರುಬ ಸಮಾಜಕ್ಕೆ ಎಸ್ಟಿ ಮೀಸಲಾತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಹಾಲುಮತ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ರುದ್ರಣ್ಣ ಗುಳಗುಳಿ ಆಗ್ರಹಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಟಿ ಮೀಸಲಾತಿಗಾಗಿ ಒಂದು ದಶಕದಿಂದ ಹೋರಾಟ ನಡೆಸಲಾಗುತ್ತಿದೆ. ಸಮುದಾಯವನ್ನು ಬಳಸಿಕೊಂಡು ಎರಡು ಬಾರಿ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರು ಸಮುದಾಯದ ಹಿತ ಕಾಪಾಡುವಲ್ಲಿ ವಿಫಲರಾಗಿದ್ದಾರೆ ಎಂದರು.

ಮೀಸಲಾತಿಗೆ ಸಂಬಂಧಿಸಿದಂತೆ ಈ ಹಿಂದೆ ಕೇಂದ್ರಕ್ಕೆ ಕುಲಶಾಸ್ತ್ರೀಯ ಅಧ್ಯಯನ ವರದಿಯನ್ನು ಸಹ ಸಲ್ಲಿಸಲಾಗಿತ್ತು. ಅದು ವಾಪಸ್ ಬಂದ ನಂತರ ಸರ್ಕಾರ ಆ ನಿಟ್ಟಿನಲ್ಲಿ ಮತ್ತೆ ಪ್ರಯತ್ನ ಮಾಡಿಲ್ಲ ಎಂದು ದೂರಿದರು.

ಕುರುಬ ಸಮಾಜಕ್ಕೆ ಆಗುತ್ತಿರುವ ಅನ್ಯಾಯ, ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಎಸ್ಟಿ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.

ಸಾಮಾಜಿಕ ಮತ್ತು ಆರ್ಥಿಕ ಗಣತಿಯ ವರದಿಯನ್ನು ಶೀಘ್ರ ಬಿಡುಗಡೆ ಮಾಡಿ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಕೊಡಿಸಬೇಕು. ಕುರುಬ ಸಮಾಜದ ಅಭಿವೃದ್ಧಿಗಾಗಿ ನಿಗಮ ರಚಿಸಿ ₹1 ಸಾವಿರ ಕೋಟಿ ಅನುದಾನ ಮೀಸಲಿಡಬೇಕು ಎಂದು ಮನವಿ ಮಾಡಿದರು.

ಕುರುಬರ ಮೂಲ ಪುರುಷ ರೇವಣ ಸಿದ್ಧೇಶ್ವರ ಜಯಂತಿಯನ್ನು ಸರ್ಕಾರ ಆಚರಿಸಬೇಕು. ಅಲ್ಲದೆ, ಜನಪದ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿರುವ ಆಲಂಬಾಡಿ ಜುಂಜೇಗೌಡ ಅವರ ಹೆಸರು ಉಳಿಸಲು ಯೋಜನೆ ರೂಪಿಸಬೇಕು ಎಂದರು.

ಕುರುಬ ಸಮಾಜದವರ ದೇವಸ್ಥಾನ, ಮಠ, ಆಸ್ತಿಯನ್ನು ಕೆಲವರು ಕಬಳಿಸಿದ್ದು, ಈ ಬಗ್ಗೆ ಪರಿಶೀಲಸಲು ಕಾಗಿನೆಲೆ ಮಹಾಸಂಸ್ಥಾನ ಕನಕಗುರು ಪೀಠದ ಸ್ವಾಮೀಜಿ ನೇತೃತ್ವದಲ್ಲಿ ಸಮಿತಿ ರಚಿಸಬೇಕು ಎಂದು ಹೇಳಿದರು.

ಸಮಾಜದ ಬೇಡಿಕೆಗಳನ್ನು ಈಡೇರಿಸದಿದ್ದರೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು. ಅಲ್ಲದೆ, ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಸಿದರು.

ಸೋಮಣ್ಣ ಮಲ್ಲೂರ ಮೌರ್ಯ, ಮಂಜುನಾಥ ಗುಡ್ಡನ್ನವರ, ಅರುಣಕುಮಾರ ಹುಲ್ಲನ್ನವರ, ರವಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.