ಹುಬ್ಬಳ್ಳಿ: ನಟ ಶಿವರಾಜಕುಮಾರ್ ಮತ್ತು ಧೃವಸರ್ಜಾ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕಾಮಿಡಿ ಕಿಲಾಡಿಯ ಮಡೆನೂರು ಮನು ವಿರುದ್ಧ ಪ್ರಕರಣ ದಾಖಲಿಸಿ, ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಶಿವರಾಜಕುಮಾರ್ ಅಭಿಮಾನಿಗಳ ಸಂಘ ಹಾಗೂ ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘದ ಸದಸ್ಯರು ಬುಧವಾರ ತಹಶೀಲ್ದಾರ್ಗೆ ಮನವಿ ಪತ್ರ ಸಲ್ಲಿಸಿದರು.

ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಮಡೆನೂರು ಮನು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಶಿವಣ್ಣ ಹೆಚ್ಚುದಿನ ಬದುಕುವುದಿಲ್ಲ, ನಂತರ ಕನ್ನಡ ಚಿತ್ರರಂಗಕ್ಕೆ ತಾನೇ ಗಂಡುಗಲಿ ಎಂದು ಮಾತನಾಡಿರುವುದು ಮಾಧ್ಯಮದಲ್ಲಿ ಬಿತ್ತರವಾಗಿದೆ. ಕನ್ನಡದ ಹಿರಿಯ ನಟರಿಗೆ ಅವಮಾನ ಮಾಡುವ ಮೂಲಕ, ಸಮಸ್ತ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ. ತಕ್ಷಣ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

ತಮಿಳು ನಟ ಕಮಲ ಹಾಸನ್ ಅವರು ಕನ್ನಡ ಭಾಷೆಗೆ ಅಪಮಾನ ಮಾಡಿದ್ದಾರೆ. ಅವರ ಯಾವ ಚಿತ್ರವೂ ಕರ್ನಾಟಕದಲ್ಲಿ ಪ್ರದರ್ಶನವಾಗಲು ಅವಕಾಶ ನೀಡದೆ ರದ್ದು ಮಾಡಬೇಕು ಎಂದು ಆಗ್ರಹಿಸಿ, ಉಪನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಕಮಲ ಹಾಸನ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಶಿವಾನಂದ ಮುತ್ತಣ್ಣವರ, ಫಕ್ಕೀರಣ್ಣ ಮದ್ರಾಸಿ, ಪುಂಡಲೀಕ ಬಡಿಗೇರ, ಚಿದಾನಂದ ಸವದತ್ತಿ, ದ್ಯಾಮಣ್ಣ ಡೋಂಗಿ, ವೆಂಕಟ ಸಟ್ಟಿ, ಬಸವರಾಜ ಸಿದ್ದಾಪೂರ, ವಿ.ಎಸ್. ಘಂಟಿಮಠ, ಹನಮಂತ ಅಮರಾವತಿ, ಮುಖೇಶ ಅಮರಾವತಿ, ವಿಜಯ ಜರತಾರಘರ, ಜಯರಾಮ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.